ಬೆಂಗಳೂರು,ಸೆಪ್ಟಂಬರ್,2,2025 (www.justkannada.in): ಭೋವಿ ನಿಗಮದಲ್ಲಿ ನಡೆದಿರುವ ಅಕ್ರಮ ಕಾಂಗ್ರೆಸ್ ಸರ್ಕಾರದ 60% ಕಮಿಷನ್ ದಂಧೆಗೆ ಸಾಕ್ಷಿಯಾಗಿದೆ ಎಂದು ಜೆಡಿಎಸ್ ಘಟಕ ವಾಗ್ದಾಳಿ ನಡೆಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್, ಭೋವಿ ನಿಗಮದಲ್ಲಿ ಭೂ ಒಡೆತನ ಯೋಜನೆಯಡಿ ಭೂಮಿ ಮಂಜೂರಾದವರಿಗೆ 25 ಲಕ್ಷ ರೂ ಸಹಾಯಧನ ಬಿಡುಗಡೆ ಮಾಡಲು ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ 5 ಲಕ್ಷ ರೂ ಕಮಿಷನ್ ಪಡೆಯುತ್ತಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಭ್ರಷ್ಟ ಅಧ್ಯಕ್ಷನನ್ನು ವಜಾ ಮಾಡಿ ಆತನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಬೇಕು ಎಂದು ಜೆಡಿಎಸ್ ಆಗ್ರಹಿಸಿದೆ.
ಭೋವಿ ನಿಗಮದ ಅಧ್ಯಕ್ಷರ ವಿರುದ್ಧ ಸರ್ಕಾರ ತನಿಖೆ ನಡೆಸಬೇಕು. ವಾಲ್ಮೀಕಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಹಗರಣ ನಡೆಸಿದ್ದ ಭ್ರಷ್ಟ ಸರ್ಕಾರ ಬಳಿಕ ಎಸ್ ಸಿ/ಎಸ್ ಪಿ/ಟಿಎಸ್ ಪಿ ನಿಧಿಯಲ್ಲಿನ ಕೋಟ್ಯಂತರ ಹಣವನ್ನು ದುರ್ಬಳಕೆ ಮಾಡಿಕೊಂಡು ಪರಿಶಿಷ್ಟರಿಗೆ ದ್ರೋಹ ಬಗೆದಿದ್ದ ಕಾಂಗ್ರೆಸ್ ಮತ್ತೊಮ್ಮೆ ದಲಿತರಿಗೆ ಅನ್ಯಾಯ ಮಾಡಿದೆ ಎಂದು ಜೆಡಿಎಸ್ ಹರಿಹಾಯ್ದಿದೆ.
Key words: illegal, commission, Bhovi corporation, JDS