ನಾನು ಅಥವಾ ಪ್ರತಾಪ್ ಸಿಂಹ ಸಂಸದನಾಗಬೇಕು ಅಂತೇನಿಲ್ಲ. ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಗೆಲ್ಲಬೇಕು-ಶಾಸಕ ಜಿ.ಟಿ ದೇವೇಗೌಡ.

ಬೆಂಗಳೂರು, ಸೆಪ್ಟಂಬರ್,15,2023(www.justkannada.in):  ಲೋಕಸಭೆ  ಚುನಾವಣೆಗೆ ಬಿಜೆಪಿಗೆ ಬೆಂಬಲ ನೀಡುತ್ತೇವೆ ಎಂದು ಹೆಚ್ ​ಡಿ ದೇವೇಗೌಡರು ಹೇಳಿದ್ದಾರೆ. ಮೈಸೂರು ಕ್ಷೇತ್ರದಲ್ಲಿ ಜೆಡಿಎಸ್​, ಬಿಜೆಪಿ ಅಭ್ಯರ್ಥಿ ಗೆಲ್ಲುತ್ತಾರೆ. ನಾನು ಅಥವಾ ಪ್ರತಾಪ್ ಸಿಂಹ ಸಂಸದನಾಗಬೇಕು ಅಂತೇನಿಲ್ಲ. ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಗೆಲ್ಲಬೇಕು, ಅದೇ ನಮ್ಮ ಗುರಿಯಾಗಿದೆ ಎಂದು ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಹೇಳಿದರು.

ಇಂದು ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಜಿ.ಟಿ ದೇವೇಗೌಡ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್​ ಮೈತ್ರಿ  ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿಶ್ ಶಾ, ಜೊತೆ ಮಾಜಿ ಪ್ರಧಾನಿ ಹೆಚ್.​ಡಿ.ದೇವೇಗೌಡರು ಮಾತನಾಡಿದ್ದಾರೆ. ದೇವೇಗೌಡರ ಬಗ್ಗೆ‌ ನರೇಂದ್ರ ಮೋದಿ ನಂಬಿಕೆ ಇಟ್ಟಿದ್ದಾರೆ. ದೇವೇಗೌಡರಿಗೆ ಅಗೌರವ ತರುವ ಕೆಲಸ ಮಾಡಿಲ್ಲ. ದೇವೇಗೌಡರು ಸಣ್ಣ ಕಾರ್ಯಕರ್ತರನ್ನು ಬಿಟ್ಟು ಕೊಡಲ್ಲ ಅಂತ ಹೇಳಿದ್ದಾರೆ. ಹೀಗಾಗಿ ಯಾರೂ ಭಯ ಬೀಳುವುದು, ಆತಂಕ ಪಡುವುದು ಬೇಡ ಎಂದರು.

ಕಾಂಗ್ರೆಸ್ ಸೋಲಿಸುವುದೇ ನಮ್ಮ ಗುರಿ. ಕಾಂಗ್ರೆಸ್ ಮುಕ್ತ ಮಾಡಬೇಕು ಅಂತ ಮೋದಿ ಹೇಳಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದು ಗ್ಯಾರಂಟಿಗಳಿಂದ ಎಂದು ಹೇಳಿದ್ದರು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲ್ಲ. ಮೋದಿಯನ್ನು ಸೋಲಿಸಲು ಆಗಲ್ಲ. ದೇವೇಗೌಡರು ಸಂಪೂರ್ಣ ಬೆಂಬಲ ನೀಡಿದ್ದಾರೆ ಎಂದು ಜಿ.ಟಿ ದೇವೇಗೌಡ ತಿಳಿಸಿದರು.

Key words: JDS-BJP-alliance-MLA-GT Devegowda