ಇಂದು ಕಾಂಗ್ರೆಸ್ ಸೇರಲಿದ್ದಾರೆ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು.

ಬೆಂಗಳೂರು,ಆಗಸ್ಟ್,21,2023(www.justkannada.in):  ರಾಜ್ಯದಲ್ಲಿ ಪಕ್ಷಾಂತರ ವಿಚಾರ ಇದೀಗ ಸಾಕಷ್ಟು ಸದ್ದು ಮಾಡುತ್ತಿದ್ದು.  ಈ ಹಿಂದೆ ಬಿಜೆಪಿ ಸೇರಿದ್ದ ವಲಸೆ ಶಾಸಕರಲ್ಲಿ ಕೆಲವರು ಮತ್ತೆ ವಾಪಸ್ ಕಾಂಗ್ರೆಸ್ ಗೆ ಹೋಗಲಿದ್ದಾರೆ ಎಂಬ ಸುದ್ದಿ ಇದೆ. ಈ ಮಧ್ಯೆ ಇಂದು  ಕೆಲ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ.

ಕಳೆದ ವಿಧಾಸಭೆ ಚುನಾವಣೆ ವೇಳೆ ಬಿಜೆಪಿ ತೊರೆದು ಜೆಡಿಎಸ್ ಸೇರಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಆಯನೂರು ಮಂಜುನಾಥ್​ ಇದೀಗ ಕಾಂಗ್ರೆಸ್ ಕದ ತಟ್ಟುತ್ತಿದ್ದಾರೆ. ಇನ್ನೊಂದೆಡೆ ಬಿಜೆಪಿ ಮುಖಂಡ ಶಿಕಾರಿಪುರ ನಾಗರಾಜ್ ಗೌಡ​ ಕೂಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ಇನ್ನು ಎಸ್​.ಟಿ.ಸೋಮಶೇಖರ್​ ಬೆಂಬಲಿಗರು ಕೂಡ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಇಂದು  ಸಂಜೆ 4 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ 15ಕ್ಕೂ ಅಧಿಕ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾಹಿತಿ  ಲಭ್ಯವಾಗಿದೆ.

Key words: JDS -BJP leaders -will -join Congress -today.