ಶಿರಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರಿಗೆ ಕೊರೋನಾ ಸೋಂಕು ದೃಢ….

ಬೆಂಗಳೂರು,ಅಕ್ಟೋಬರ್,6,2020(www.justkannada.in):  ಶಿರಾ ಕ್ಷೇತ್ರದ ಉಪಚುನಾವಣೆಗೆ  ಜೆಡಿಎಸ್ ಅಭ್ಯರ್ಥಿಯಾಗಿ ದಿವಂಗತ ಶಾಸಕ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರ ಹೆಸರನ್ನ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಘೋಷಣೆ ಮಾಡಿದ್ದಾರೆ.

ಈ ಮಧ್ಯೆ ಜೆಡಿಎಸ್ ಅಭ್ಯರ್ಥಿಯಾಗಿ ಹೆಸರು ಘೋಷಣೆಯಾದ ಬೆನ್ನಲ್ಲೆ  ಅಮ್ಮಾಜಮ್ಮ ಅವರಿಗೆ ಕೊರೋನಾ ಸೋಂಕು ತಗುಲಿದೆ ಎಂಬ ಮಾಹಿತಿ ಲಭ್ಯವಾಗಿದೆ.  ಜೆಡಿಎಸ್ ಹೆಚ್ ಡಿ ದೇವೇಗೌಡರು ಇಂದು ಶಿರಾ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ  ಅಮ್ಮಾಜಮ್ಮ ಅವರ ಹೆಸರನ್ನ ಘೋಷಿಸಿದ್ದರು. ಇದಾದ ನಂತರ ಇದೀಗ ಶಿರಾ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.JDS candidate -Ammajamma - Shira constituency - coronavirus.

ಈ ಕುರಿತು  ಅಮ್ಮಾಜಮ್ಮ ಅವರ ಪುತ್ರ ಸತ್ಯಪ್ರಕಾಶ್ ಮಾಹಿತಿ ನೀಡಿದ್ದಾರೆ. ಕಳೆದ ಮೂರು ದಿನಗಳಿಂದ ನಮ್ಮ ತಾಯಿ ಅಮ್ಮಾಜಮ್ಮ ಮೈಕೈನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಅವರು ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದರು. ಇದೀಗ ಅವರಿಗೆ  ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.

Key words: JDS candidate -Ammajamma – Shira constituency – coronavirus.