Sunday, September 20, 2026

BDA Apartments

Home Front Page ಇಂದೇ ಮೂರು ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಣೆ- ಹೆಚ್.ಡಿ ಕುಮಾರಸ್ವಾಮಿ.

ಇಂದೇ ಮೂರು ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಣೆ- ಹೆಚ್.ಡಿ ಕುಮಾರಸ್ವಾಮಿ.

ಬೆಂಗಳೂರು,ಮಾರ್ಚ್,26,2024,  (www.justkannada.in): ಇಂದು ಸಂಜೆ ವೇಳೆಗೆ ಹಾಸನ, ಕೋಲಾರ, ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳ ಹೆಸರನ್ನ ಅಧಿಕೃತವಾಗಿ ಘೋಷಣೆ ಮಾಡುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಹಾಸನ ಕ್ಷೇತ್ರಕ್ಕೆ  ಪ್ರಜ್ವಲ್ ರೇವಣ್ಣ ಹೆಸರು ಈಗಾಗಲೇ ಫೈನಲ್ ಆಗಿದೆ. ಸಂಜೆ ವೇಳೆಗೆ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಿಸುತ್ತೇವೆ.  ಮಂಡ್ಯದಿಂದ ನನ್ನ ಸ್ಪರ್ಧೆಗೆ ಒತ್ತಡವಿದೆ.  ಪಕ್ಷ ುಳಿಸಲು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.ಇಂದೇ ಮೂರು ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಣೆ hdk

ರಾಜ್ಯದಲ್ಲಿ ನೀರಾವರಿ ಯೋಜನೆ ವಿಚಾರಗಳಲ್ಲಿ ರೈತರಿಗೆ ತುಂಬಾ ಅನ್ಯಾಯವಾಗಿದೆ.ಕಾಂಗ್ರೆಸ್ ಕೇಂದ್ರದಲ್ಲಿ ಆಡಳಿತದಲ್ಲಿ ಇದ್ದಾಗ ರೈತರನ್ನು ನಿರ್ಲಕ್ಷ ಮಾಡಿದೆ. ಈಗ ನರೇಂದ್ರ ಮೋದಿ ಸರ್ಕಾರ ಬಂದ ಮೇಲೆ ಕಾಂಗ್ರೆಸ್ ಕೇಂದ್ರ ಸರ್ಕಾರದ ಮೇಲೆ ಗೂಬೆಕೂರಿಸುತ್ತಿದೆ.ಕೇವಲ ಶಂಕುಸ್ಥಾಪನೆ ನೆರವೇರಿಸಿದ್ದಷ್ಟೆ ಕಾಂಗ್ರೆಸ್ ನ ಕೀರ್ತಿ ಎಂದು ಎಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

Key words:  JDS candidates, announce,HD Kumaraswamy.