ಜೆಡಿಎಸ್ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ಆಗಲ್ಲ: ಅತಂತ್ರ ಫಲಿತಾಂಶಕ್ಕೆ ಕಾಯುತ್ತಿದ್ದಾರೆ-ಮಾಜಿ ಸಿಎಂ ಸಿದ್ಧರಾಮಯ್ಯ.

ಬೆಂಗಳೂರು,ಮಾರ್ಚ್,30,2023(www.justkannada.in): ಜೆಡಿಎಸ್ ಎಷ್ಟೇ ಬಾಯಿ ಬಡಿದುಕೊಂಡರೂ ಅಧಿಕಾರಕ್ಕೆ ಬರಲ್ಲ . ಜೆಡಿಎಸ್ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಅತಂತ್ರ ಫಲಿತಾಂಶ ಬರಲೆಂಧು ಜೆಡಿಎಸ್ ನವರು ಕಾಯುತ್ತಿದ್ದಾರೆ. ಈ ಬಾರಿ ಅತಂತ್ರ ಫಲಿತಾಂಶ ಬರಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಲೇವಡಿ ಮಾಡಿದರು.

ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಿದ್ಧರಾಮಯ್ಯ, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಎಲ್ಲಾ ಶುಭ ಸೂಚನೆಗಳಿವೆ.  ರಾಜ್ಯಕ್ಕೆ ಹೆಚ್.ಡಿ ದೇವೇಗೌಡರು, ಹೆಚ್.ಡಿ ಕುಮಾರಸ್ವಾಮಿ  ಹೊಸದಾಗಿ ಬಂದಿಲ್ಲ ರಾಜ್ಯ  ಉಳಿಸಬೇಕು ಅಂದ್ರೆ ಅದು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ. ವಾತಾವರಣ ನೋಡಿದರೇ ನೂರಕ್ಕೆ ನೂರರಷ್ಟು ನಾವೇ ಅಧಿಕಾರಕ್ಕೆ  ಬರುತ್ತೇವೆ. ಅತ್ಯಧಿಕ ಸ್ಥಾನ ಗೆದ್ದು ಅಧಿಕಾರಕ್ಕೆ ಬರುತ್ತೇವೆ ಎಂದರು.

ವರುಣಾ ಕ್ಷೇತ್ರದಿಂದ ಬಿಎಸ್ ಯಡಿಯೂರಪ್ಪ ಸ್ಪರ್ಧಿಸಿದರೂ ಸ್ವಾಗತಿಸುವೆ. ಪ್ರತಿಸ್ಪರ್ಧಿ ಬಗ್ಗೆ ತಲೆಕೆಡಿಸಿಕೊಳ್ಳಲ್ಲ ಎಂದು ಸಿದ್ಧರಾಮಯ್ಯ ತಿಳಿಸಿದರು.

Key words: JDS -can’t- come –power-Former CM- Siddaramaiah.