Thursday, July 30, 2026

BDA Apartments

Home Front Page ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರಪತಿ ಭಾಷಣ ಬಹಿಷ್ಕರಿಸಲು ಜೆಡಿಎಸ್ ನಿರ್ಧಾರ…

ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರಪತಿ ಭಾಷಣ ಬಹಿಷ್ಕರಿಸಲು ಜೆಡಿಎಸ್ ನಿರ್ಧಾರ…

ಬೆಂಗಳೂರು,ಜನವರಿ,29,2021(www.justkannada.in): ಕೇಂದ್ರ ಸರ್ಕಾರದ ಕೃಷಿ ತಿದ್ಧುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರಪತಿಗಳ ಭಾಷಣವನ್ನ ಬಹಿಷ್ಕರಿಸಲು ಜೆಡಿಎಸ್ ನಿರ್ಧರಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ,  ಕೃಷಿ ಕಾಯ್ದೆಗಳನ್ನು ವಿರೋಧಿಸಿ ನನ್ನ ರೈತ ಸಹೋದರರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲವಾಗಿ ಇಂದು ರಾಷ್ಟ್ರಪತಿಗಳ ಭಾಷಣಕ್ಕೆ ಹಾಜರಾಗದಿರಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ. JDS- decision - boycott -President's- speech -opposition - Agricultural Amendment Act

ಈ ಮೂಲಕ ಕೇಂದ್ರದ ಕೃಷಿ ವಿಧೇಯಕಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸುವ ಸಲುವಾಗಿ ಇಂದು ಜಂಟಿ ಅಧಿವೇಶನದಲ್ಲಿ ನಡೆಯುವ ರಾಷ್ಟ್ರಪತಿ ಭಾಷಣವನ್ನು ಬಹಿಷ್ಕರಿಸಲು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ನಿರ್ಧರಿಸಿದ್ದಾರೆ. ರಾಷ್ಟ್ರಪತಿ ಭಾಷಣವನ್ನು ಬಹಿಷ್ಕರಿಸಲು ಈಗಾಗಲೇ  ಕಾಂಗ್ರೆಸ್  ಸೇರಿ 16 ವಿಪಕ್ಷಗಳು ನಿರ್ಧರಿಸಿದೆ.

Key words: JDS- decision – boycott -President’s- speech -opposition – Agricultural Amendment Act