ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್.ಶ್ರೀನಿವಾಸ್ ರಾಜೀನಾಮೆ ಸಲ್ಲಿಕೆ ನಾಳೆ

ಬೆಂಗಳೂರು, ಮಾರ್ಚ್ 26, 2023 (www.justkannada.in): ಶಾಸಕ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡುವುದಾಗಿ ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದ್ದಾರೆ.

ಸದ್ಯಕ್ಕೆ ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ಕೊಡುತ್ತೇನೆ. ಇನ್ನು ಬೇರೆ ಶಾಸಕರ ರಾಜಿನಾಮೆಗಳ ಬಗ್ಗೆ ನನಗೆ ಗೊತ್ತಿಲ್ಲ ಎಂದು ಎಸ್.ಆರ್.ಶ್ರೀನಿವಾಸ್ ತಿಳಿಸಿದ್ದಾರೆ.

ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್, ಇಂದೇ ರಾಜಿನಾಮೆ ಕೊಡಬೇಕಿತ್ತು. ಆದರೆ ಸ್ಪೀಕರ್ ಇರಲಿಲ್ಲ. ಹಾಗಾಗಿ ಸೋಮವಾರ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.