ಬೆಂಗಳೂರು, ನವೆಂಬರ್, 24,2025 (www.justkannada.in): ಅಧ್ಯಕ್ಷರಾಗಿದ್ದರೂ ನಿಮಗೆ ಚಲಾಯಸಿಲು ಯಾವುದೇ ಅಧಿಕಾರವಿಲ್ಲ. ನಿವೋಬ್ಬ ರಬ್ಬರ್ ಸ್ಟಾಂಪ್ ಅಧ್ಯಕ್ಷ ಎಂಬುದು ಸಾಬೀತಾಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಜೆಡಿಎಸ್ ರಾಜ್ಯ ಘಟಕ ಟೀಕಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್, ಮಲ್ಲಿಕಾರ್ಜುನ ಖರ್ಗೆ ಅವರೇ ತಾವು ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷರೋ? ಅಥವಾ ಕರ್ನಾಟಕ ಕಾಂಗ್ರೆಸ್ ನ ಉಸ್ತುವಾರಿಯೋ?
ನಿಮ್ಮ ಅಸಹಾಯಕ ಮಾತುಗಳಿಂದ ಎಲ್ಲವೂ ತಿಳಿಯುತ್ತಿದೆ. ಅಧ್ಯಕ್ಷರಾಗಿದ್ದರೂ ನಿಮಗೆ ಚಲಾಯಸಿಲು ಯಾವುದೇ ಅಧಿಕಾರವಿಲ್ಲ. ತಾವೊಬ್ಬ ರಬ್ಬರ್ ಸ್ಟಾಂಪ್ ಅಧ್ಯಕ್ಷ ಎಂಬುದು ಸಾಬೀತಾಗುತ್ತಿದೆ. ಜೊತೆಗೆ ಕಾಂಗ್ರೆಸ್ ಪಕ್ಷದ ಗುಲಾಮಿತನವನ್ನ ಜಗಜ್ಜಾಹೀರುಗೊಳಿಸಿದೆ ಎಂದು ಜೆಡಿಎಸ್ ಲೇವಡಿ ಮಾಡಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಪೂರ್ಣಗೊಳಿಸಿದ ಬೆನ್ನಲ್ಲೆ ಅಧಿಕಾರ ಹಂಚಿಕೆ ವಿಚಾರ ಮುನ್ನೆಲೆಗೆ ಬಂದಿದೆ. ಕೆಲ ಶಾಸಕರು ಮುಖಂಡರು ದೆಹಲಿಗೆ ಹೋಗಿ ಹೈಕಮಾಂಡ್ ಭೇಟಿಯಾಗುತ್ತಿದ್ದಾರೆ. ಈ ವಿಚಾರ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಜೆಡಿಎಸ್ ಟೀಕಿಸಿದೆ.
Key words: ‘rubber stamp, President, JDS ,criticizes ,Mallikarjun Kharge







