ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮರಿತಿಬ್ಬೇಗೌಡ.

ಹುಬ್ಬಳ್ಳಿ, ಮಾರ್ಚ್,21,2024(www.justkannada.in):  ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ  ಮರಿತಿಬ್ಬೇಗೌಡ ಅವರು ರಾಜೀನಾಮೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿರುವ  ಸಭಾಪತಿ ಬಸವರಾಜ ಹೊರಟ್ಟಿ ನಿವಾಸಕ್ಕೆ ತೆರಳಿ ಮರಿತಿಬ್ಬೇಗೌಡ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ರಾಜೀನಾಮೆಯನ್ನ  ಬಸವರಾಜ ಹೊರಟ್ಟಿ ಅಂಗೀಕಾರ ಮಾಡಿದ್ದಾರೆ. ಹೆಚ್​ಡಿ ದೇವೇಗೌಡ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ ಮರಿತಿಬ್ಬೇಗೌಡ ಅವರು  ಜೆಡಿಎಸ್ ಪಕ್ಷಕ್ಕೂ ಗುಡ್ ​ಬೈ ಹೇಳಿದ್ದಾರೆ.

ರಾಜೀನಾಮೆ ಸಲ್ಲಿಕೆ ಬಳಿಕ ಮಾತನಾಡಿದ ಮರಿತಿಬ್ಬೇಗೌಡ, ಮುಂದಿನ ಅವಧಿಗೆ ನಾನು ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ. ಸಭಾಪತಿಗಳು ರಾಜೀನಾಮೆ ಅಂಗೀಕಾರ ಮಾಡಿದ್ದಾರೆ. ಸಭಾಪತಿಗೆ ಧನ್ಯವಾದಗಳು. ಅಲ್ಲದೆ, ಕೆಲವು ವೈಯಕ್ತಿಕ ಕಾರಣದಿಂದ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದರು.

ಹೆಚ್ ಡಿ ದೇವೆಗೌಡ, ಹೆಚ್. ​ಡಿ ಕುಮಾರಸ್ವಾಮಿ ಅವರು ನಮಗೆ ಸರಿಯಾಗಿ ಸ್ಪಂದಿಸಲಿಲ್ಲ. ನಿಷ್ಠಾವಂತರನ್ನು ಕಡೆಗಣನೆ ಮಾಡಿದ್ದಾರೆ. ನಾವು ಈ ವಿಷಯ ಅವರಿಗೆ ಹೇಳಿದರೆ, ಅದು ನಮ್ಮ ವರಿಷ್ಠರಿಗೆ ಹಿಡಿಸಲಿಲ್ಲ ಎಂದು  ಮರಿತಿಬ್ಬೇಗೌಡ ಅಸಮಾಧಾನ  ವ್ಯಕ್ತಪಡಿಸಿದರು.

Key words:JDS- Marithibbe Gowda- resigned –MLC-Position