ಬೆಂಗಳೂರು, ನ.೧೯, ೨೦೨೫: “ ಮನೆಕೆಲಸದ ಮಹಿಳೆಯ ಘನತೆಗೆ ಚ್ಯುತಿ ಉಂಟು ಮಾಡಿದ” ಆರೋಪ ಎದುರಿಸುತ್ತಿದ್ದ ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣಗೆ ರಿಲ್ಯಾಕ್ಸ್ ನೀಡಿದ ಕೋರ್ಟ್ ಆದೇಶ.
ಸಚಿವ ರೇವಣ್ಣ ವಿರುದ್ಧದ, ಮನೆಕೆಲಸದ ಮಹಿಳೆಯ ಘನತೆಗೆ ಚ್ಯುತಿ ಉಂಟು ಮಾಡಿದ ಆರೋಪವನ್ನು ಇಂದು ಹೈಕೋರ್ಟ್ ರದ್ದುಗೊಳಿಸಿದೆ. ಆದರೆ, ಲೈಂಗಿಕ ದೌರ್ಜನ್ಯ ಆರೋಪವನ್ನು ಹೊಸದಾಗಿ ಪರಿಗಣಿಸಲು ಪ್ರಕರಣವನ್ನು ಮತ್ತೆ ವಿಚಾರಣಾಧೀನ ನ್ಯಾಯಾಲಯಕ್ಕೆ ವಾಪಸ್ ಕಳುಹಿಸಿದೆ. ಹಾಗಾಗಿ ರೇವಣ್ಣಗೆ ತಾತ್ಕಾಲಿಕ ರಿಲೀಫ್.
ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿದಾಖಲಾಗಿರುವ ಪ್ರಕರಣ ರದ್ದು ಕೋರಿ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಏಕಸದಸ್ಯಪೀಠ ಬುಧವಾರ ಪ್ರಕಟಿಸಿದೆ.
ಎಲ್ಲಾದಾಖಲೆಗಳನ್ನು, ವಾದ-ಪ್ರತಿವಾದವನ್ನು ಅವಲೋಕಿಸಿದ ಬಳಿಕ ನ್ಯಾಯಾಲಯ, ‘‘ಕ್ರಿಮಿನಲ್ ಅರ್ಜಿಯನ್ನು ಭಾಗಶಃ ಪುರಸ್ಕರಿಸಲಾಗಿದೆ. 42ನೇ ಎಸಿಜೆಎಂ ನ್ಯಾಯಾಲಯವು ರೇವಣ್ಣ ವಿರುದ್ಧ ಐಪಿಸಿ 354 (ಮಹಿಳೆಯ ಘನತೆಗೆ ಚ್ಯುತಿ) ಅಡಿ ಆರೋಪ ಪರಿಣಿಸಿರುವುದನ್ನು ರದ್ದುಗೊಳಿಸಲಾಗಿದೆ. ಆದರೆ ಐಪಿಸಿ 354ಎ (ಲೈಂಗಿಕ ದೌರ್ಜನ್ಯ) ಅಡಿ ಸೂಕ್ತ ಆದೇಶ ಮಾಡಲು ಪರಿಗಣಿಸುವಂತೆ ಪ್ರಕರಣವನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ವಾಪಸ್ ಕಳುಹಿಸಲಾಗುತ್ತಿದೆ’’ ಎಂದು ಆದೇಶಿಸಿತು.
“ ದೂರಿನಲ್ಲಿನ ಆರೋಪಗಳು ಐಪಿಸಿ ಸೆಕ್ಷ ನ್ 354ಎ ಅಡಿ ಬರುತ್ತವೆ. ಐಪಿಸಿ ಸೆಕ್ಷ ನ್ 354 ಅನ್ವಯಿಸಲ್ಲ. ನನ್ನ ಪ್ರಕಾರ ಸಂತ್ರಸ್ತೆಯ ಘನತೆಗೆ ಹಾನಿ ಮಾಡುವ ಉದ್ದೇಶ ತೋರುವುದಿಲ್ಲ. ಇದು ಲೈಂಗಿಕ ದೌರ್ಜನ್ಯವಾಗುತ್ತದೆ. ಇದು ನನ್ನ ಅಭಿಪ್ರಾಯ, ನಿಮಗೆ ಅಗತ್ಯವಿದ್ದರೆ ಅದನ್ನು ಪ್ರಶ್ನಿಸಬಹುದು” ಎಂದು ಕೋರ್ಟ್ ಹೇಳಿದೆ. (ಆದೇಶದ ಪ್ರತಿ ಇನ್ನೂ ಬಿಡುಗಡೆಯಾಗಬೇಕಿದೆ).

ಏನಿದು ಪ್ರಕರಣ:
ಮನೆಯಲ್ಲಿಕೆಲಸಕ್ಕಿದ್ದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ.ರೇವಣ್ಣ ಹಾಗೂ ಅವರ ಮಗ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ2024ರ ಏಪ್ರಿಲ್ 28ರಂದು ಪ್ರಕರಣ ದಾಖಲು.
ಸಂತ್ರಸ್ತೆಯ ದೂರು ಆಧರಿಸಿ ಐಪಿಸಿ ಸೆಕ್ಷ ನ್ ಪ್ರಕರಣ 354ಅ, 354ಎ, 506, 509ರ ಅಡಿ ಪ್ರಕರಣ . ರೇವಣ್ಣ ಮೊದಲನೇ ಆರೋಪಿ, ಪುತ್ರ ಪ್ರಜ್ವಲ್ ಎರಡನೇ ಆರೋಪಿ. ಈ ಮಧ್ಯೆ, ಸಂತ್ರಸ್ತೆಯನ್ನು ಅಪಹರಿಸಿದ ಸಂಬಂಧ ರೇವಣ್ಣ ಪತ್ನಿ ಭವಾನಿ ಸೇರಿ ಒಂಭತ್ತು ಮಂದಿ ವಿರುದ್ಧ ಕೆ.ಆರ್.ಪೇಟೆ ಠಾಣೆಯಲ್ಲಿ ಬೇರೊಂದು ಪ್ರಕರಣ. ಅದರಲ್ಲಿ ರೇವಣ್ಣ ಮೊದಲ ಆರೋಪಿಯಾಗಿದ್ದು, ಜಾಮೀನು ಪಡೆದು ಹೊರಬಂದಿದ್ದಾರೆ.
key words: Court grants, temporary relief, former minister, JDS MLA, H.D. Revanna.

SUMMARY:
Court grants temporary relief to former minister and JDS MLA H.D. Revanna.

Court orders relaxation for former minister and JDS MLA H.D. Revanna, who was facing charges of “indecent assault on a housewife”. The High Court today quashed the charges against Minister Revanna for indecent assault on a housewife. However, it sent the case back to the trial court for a fresh consideration of the sexual assault charge. Hence, temporary relief for Revanna.







