ಜೆಡಿಎಸ್ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರಲು ದಿನಾಂಕ ಫಿಕ್ಸ್.

ಹಾಸನ,ಮಾರ್ಚ್,2,2023(www.justkannada.in): ಈವರೆಗೂ ಜೆಡಿಎಸ್ ನಿಂದ ದೂರ ಉಳಿದು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸುಳಿವು ನೀಡಿದ್ದ ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾಂಗ್ರೆಸ್ ಸೇರುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ನಿನ್ನೆ ತಡರಾತ್ರಿ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ ಶಾಸಕ ಶಿವಲಿಂಗೇಗೌಡ ಮಾರ್ಚ್ 5 ರಂದು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲಿದ್ದಾರೆ.  ಮಾರ್ಚ್ 5 ರಂದು ಅರಸೀಕೆರೆಯಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಸಮ್ಮುಖದಲ್ಲಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರಲಿದ್ದಾರೆ.

ಈ ಮೂಲಕ ಕಳೆದ ಒಂದು ವರ್ಷದಿಂದ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾಂಗ್ರೆಸ್ ಸೇರುತ್ತಾರಾ ಎಂಬ ಬಗ್ಗೆ ಇದ್ದ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಇಷ್ಟು ದಿನ ಕಾಂಗ್ರೆಸ್ ಸೇರುವ ಬಗ್ಗೆ ಅಡ್ಡಗೋಡೆ ಮೇಲೆ ದೀಪವಿಟ್ಟು ಮಾತನಾಡುತ್ತಿದ್ದ ಅವರು, ಬೆಂಬಲಿಗರ ಆಶಯದಂತೆ ಮಾರ್ಚ್ 5 ರಂದು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ.

Key words: JDS –MLA- Shivlinge Gowda- fixes- date – join- Congress.