ಕಾಂಗ್ರೆಸ್ ಗೆ ಬೆಂಬಲ ಸೂಚಿಸಿದ ಜೆಡಿಎಸ್ ಎಂ.ಎಲ್.ಸಿ ಮರಿತಿಬ್ಬೆಗೌಡ.

ಮೈಸೂರು,ಮೇ,6,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ವಿಧಾನಪರಿಷತ್  ಜೆಡಿಎಸ್ ಸದಸ್ಯ ಮರಿತಿಬ್ಬೆಗೌಡ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದ್ದಾರೆ.

ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜೆಡಿಎಸ್ ಎಂಎಲ್ ಸಿ ಮರಿತಿಬ್ಬೆಗೌಡ, ಈ ಬಾರಿಯ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಪಕ್ಷವನ್ನ ಬೆಂಬಲಿಸಬೇಕು. ಭ್ರಷ್ಟಾಚಾರ ಅನ್ನುವುದು ಎಲ್ಲಾ ಸಮಯದಲ್ಲೂ ಇದೆ. ಆದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅತಿ ಹೆಚ್ಚು ಭ್ರಷ್ಟಾಚಾರವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಒಂದು ಉದ್ಯೋಗ ತುಂಬಲು ಸಾಧ್ಯವಾಗಿಲ್ಲ ಈ ಸರ್ಕಾರಕ್ಕೆ. ಮೂರು ವರ್ಷ ತುಂಬಿದರೂ ಒಂದು ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲಿಲ್ಲ. ಜನರ ಬಗ್ಗೆ ಈ ಸರ್ಕಾರಕ್ಕೆ ಕಾಳಜಿಯಿಲ್ಲ ಎಂದು ಟೀಕಿಸಿದರು.

ಈ ಬಾರಿಯ ಚುನಾವಣೆಯಲ್ಲಿ ಅತಂತ್ರ ಸರ್ಕಾರ ಬರುವಂತೆ ಮಾಡಬೇಡಿ. ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಿ ಎಂದು ವಿಧಾನಪರಿಷತ್ ಸದಸ್ಯ ಮರಿತಿಬ್ಬೆಗೌಡ ಮನವಿ ಮಾಡಿದರು.

Key words: JDS -MLC- Marithibbegowda- supported -Congress.