ಜೆಡಿಎಸ್ ಒಂದ್‌ ಸೀಟೂ ಗೆಲ್ಲಲ್ಲ : ಡಿ.ಕೆ.ಶಿವಕುಮಾರ್‌

JD(S),  will not win,  a single , Lok Sabha seat

ಬೆಂಗಳೂರು, ಏ. 10, 2024  : (www.justkannada.in news ) ಈ ಬಾರಿ ಚುನಾವಣೆಯಲ್ಲಿ ರಾಜ್ಯದಿಂದ ಜೆಡಿಎಸ್ ಒಂದೇ ಒಂದು  ಲೋಕಸಭಾ ಸ್ಥಾನವನ್ನೂ ಗೆಲ್ಲುವುದಿಲ್ಲ. ಎನ್ ಡಿಎ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಮೂವರು ಜೆಡಿಎಸ್ ಅಭ್ಯರ್ಥಿಗಳು ಚುನಾವಾಣೆಯಲ್ಲಿ ಪರಾಭವಗೊಳ್ಳಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಡಿಕೆ ಶಿವಕುಮಾರ್ ಹೇಳಿದಿಷ್ಟು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಡಾ.ಸಿಎನ್ ಮಂಜುನಾಥ್ ಅವರನ್ನೂ ಸಹ ಸೋಲಿಸಲಿದ್ದೇವೆ. ಮಂಡ್ಯ, ಹಾಸನ, ಕೋಲಾರ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವೇ ಗೆಲ್ಲಲಿದೆ ಎಂದೂ ಡಿಕೆಶಿ  ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಗೆಲುವಿನ ಬಗ್ಗೆ ಭವಿಷ್ಯ ನುಡಿದಿದ್ದ ತಜ್ಞರು ಈಗ ತಮ್ಮ ಭವಿಷ್ಯ ನುಡಿಯಲು ಹಿಂಜರಿಯುತ್ತಿದ್ದಾರೆ ಎಂದು  ಲೇವಡಿ ಮಾಡಿದ ಡಿ.ಕೆ.ಶಿವಕುಮಾರ್‌,  ಖರ್ಗೆ ಅವರು ಏಪ್ರಿಲ್ 12 ರಂದು ಕಲಬುರಗಿಗೆ ಭೇಟಿ ನೀಡಿ, ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು.

ಕಲಬುರಗಿ ಕ್ಷೇತ್ರದಿಂದ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.

ಅಭ್ಯರ್ಥಿ ಬದಲಾವಣೆ ಇಲ್ಲ :

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಮಾಡುವುದಿಲ್ಲ. “ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ದಿಂಗಾಲೇಶ್ವರ ಸ್ವಾಮೀಜಿ ಅವರ ಬಗ್ಗೆ ನಮಗೆ ಅಪಾರ ಗೌರವವಿದೆ. ಅವರು ಮೊದಲೇ ನಿರ್ಧಾರ ತೆಗೆದುಕೊಂಡು ನಮ್ಮನ್ನು ಸಂಪರ್ಕಿಸಿದ್ದರೆ, ಅದು ಬೇರೆಯಾಗಬಹುದಿತ್ತು. ಇದೀಗ ಪಕ್ಷದ ಯುವ ಅಭ್ಯರ್ಥಿ ಪ್ರಚಾರ ಕಾರ್ಯವನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ. ಈಗ ಪರ್ಯಾಯ ಯೋಚನೆ ಅಸಾಧ್ಯ ಎಂದರು.

ಒಕ್ಕಲಿಗ ಸಿಎಂ ಕೆಳಗಿಳಿಸಿದ್ದನ್ನ ಸ್ವಾಮೀಜಿ ಕೇಳಬೇಕಿತ್ತು-ಮೈತ್ರಿ ನಾಯಕರ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಲೇವಡಿ.

 

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಧಾರವಾಡದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

key words :  JD(S),  will not win,  a single , Lok Sabha seat

 

ENGLISH SUMMARY : 

JD(S) will not win a single Lok Sabha seat from the state in this election. Deputy Chief Minister DK Shivakumar said that three JD(S) candidates contesting as NDA candidates will be defeated in the elections.