Saturday, August 15, 2026

BDA Apartments

Home Front Page ಜೆ.ಡಿ.ಎಸ್, ಬಿಜೆಪಿ ವಿಲೀನ ಸಿಎಂ ಹೇಳಿದ್ದು, ಏನು…?

ಜೆ.ಡಿ.ಎಸ್, ಬಿಜೆಪಿ ವಿಲೀನ ಸಿಎಂ ಹೇಳಿದ್ದು, ಏನು…?

ಸುಳ್ಳುಬೆಂಗಳೂರು,ಡಿಸೆಂಬರ್,20,2020(www.justkannada.in) : ಜೆ.ಡಿ.ಎಸ್.ಶಾಸಕರು ಬಿಜೆಪಿಗೆ ಬರುವುದಾಗಲೀ ಅಥವಾ ಜೆ.ಡಿ.ಎಸ್ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನಗೊಳಿಸುವಂತಹ ಗೊಂದಲದ ವರದಿಗಳು ಶುದ್ಧ ಸುಳ್ಳು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.Teachers,solve,problems,Government,bound,Minister,R.Ashokಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿಯವರು ವಿಧಾನ ಪರಿಷತ್ ಸಭಾಪತಿಗಳ ವಿಚಾರದಲ್ಲಿ ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ. ಆದರೆ, ಯಾವುದೇ ಜೆ.ಡಿ.ಎಸ್.ಶಾಸಕರು ಬಿಜೆಪಿಗೆ ಬರುವುದಾಗಲೀ ಅಥವಾ ಜೆ.ಡಿ.ಎಸ್ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನಗೊಳಿಸುವಂತಹ ಗೊಂದಲದ ವರದಿಗಳು ಶುದ್ಧ ಸುಳ್ಳು ಎಂದಿದ್ದಾರೆ.

ಕೇವಲ ಪರಿಷತ್ ಸಭಾಪತಿ ವಿಚಾರದಲ್ಲಿ ಮಾತ್ರ ನಮಗೆ ಸಹಕಾರ ನೀಡುತ್ತಿದ್ದಾರೆಯೇ ವಿನಃ ಮತ್ತೇನೂ ಇಲ್ಲ. ಗೋಹತ್ಯೆ ನಿಷೇಧದ ಬಗ್ಗೆ ನಮ್ಮ ಬೆಂಬಲವಿಲ್ಲ ಎಂದು ಸಹ ಕುಮಾರಸ್ವಾಮಿ ಸ್ಪಷ್ಟವಾಗಿ ಹೇಳಿದ್ದರಿಂದ ನಾವು ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿಗೆ ತರುತ್ತಿದ್ದೇವೆ ಎಂದು ಹೇಳಿದ್ದಾರೆ.JDS-BJP-merger-CM-said-what ...?

ಕೃಪೆ- internetಇನ್ನು ವಿಧಾನಸಭೆಗೆ ಚುನಾವಣೆ ಇನ್ನೂ ಎರಡೂವರೆ ವರ್ಷ ಇದೆ. ಈಗ ಮಾಧ್ಯಮಗಳಲ್ಲಿ ಬರುತ್ತಿರುವ ಬಿಜೆಪಿ ಜತೆ ಜೆಡಿಎಸ್ ವಿಲೀನ ಸುದ್ದಿಗಳು ಸತ್ಯಕ್ಕೆ ದೂರ ಎಂದು ತಿಳಿಸಿದ್ದಾರೆ.

key words : JDS-BJP-merger-CM-said-what …?