ಬಿಹಾರದಲ್ಲಿ ಜೆಡಿಯು-ಬಿಜೆಪಿ ಸರ್ಕಾರ ಪತನ ಬಹುತೇಕ ಖಚಿತ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ನಿತೀಶ್ ಕುಮಾರ್.

ಪಾಟ್ನಾ,ಆಗಸ್ಟ್,9,2022(www.justkannada.in): ಬಿಹಾರದಲ್ಲಿ ಮಹತ್ವದ ರಾಜಕೀಯ ಬದಲಾವಣೆಯಾಗುವ ಸಾಧ್ಯತೆ ಇದ್ದು, ಜೆಡಿಯು-ಬಿಜೆಪಿ ಸರ್ಕಾರ ಪತನ ಬಹುತೇಕ ಖಚಿತವಾಗಿದೆ. ಬಿಜೆಪಿ ಜೊತೆಗಿನ ಮೈತ್ರಿಯಿಂದ ದೂರ ಸರಿಯಲು ನಿರ್ಧರಿಸಿರುವ ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದಾರೆ ಎನ್ನಲಾಗಿದೆ.

ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ಭಿನ್ನಾಭಿಪ್ರಾಯ ಭುಗಿಲೆದ್ದಿದೆ. ಹೀಗಾಗಿ, ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಳ್ಳಲು ನಿತೀಶ್ ಕುಮಾರ್ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಿಹಾರದಲ್ಲಿ ಜೆಡಿಯು- ಬಿಜೆಪಿ ಮೈತ್ರಿ ಸರ್ಕಾರ ಪತನವಾಗುವುದು ಬಹುತೇಕ ಖಚಿತವಾಗಿದೆ.

ಇನ್ನು ನಿತೀಶ್ ಕುಮಾರ್ , ಆರ್ ಜೆಡಿ, ಕಾಂಗ್ರೆಸ್ ಜೊತೆ ಸೇರಿ ಮಹಾಘಟಬಂಧನ್ ರಚನೆ ಮಾಡುವ ನಿರ್ಧಾರ ಮಾಡಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ತೇಜಸ್ವಿ ಯಾದವ್  ಅವರೊಂದಿಗೆ ರಾಜ್ಯಪಾಲರ ಭೇಟಿಗೆ ನಿತೀಶ್ ಕುಮಾರ್   ಇಂದು ಸಂಜೆ 4 ಗಂಟೆಗೆ ಸಮಯಾವಕಾಶ ಕೇಳಿದ್ದಾರೆ.

ಬಿಹಾರ ಸಿಎಂ ನಿತೀಶ್ ಕುಮಾರ್, ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಮತ್ತು ಇತರ ಮಹಾಘಟಬಂಧನ್ ಘಟಕಗಳು ಇಂದು ರಾಜ್ಯಪಾಲರನ್ನು ಭೇಟಿ ಮಾಡುವ ಸಾಧ್ಯತೆಯಿದೆ.

Key words: JDU-BJP- government -Bihar- fall-Nitish Kumar