ಜೆಇಇ ಮೇನ್ಸ್ ತೇರ್ಗಡೆ: ಅಡ್ವಾನ್ಸ್ಡ್ ಪರೀಕ್ಷೆಗೆ ಅರ್ಹತೆ ಪಡೆದ ಮೈಸೂರಿನ ಸರ್ಕಾರಿ ಕಾಲೇಜಿನ ವಿದ್ಯಾರ್ಥಿ.

ಮೈಸೂರು,ಏಪ್ರಿಲ್, 29,2023(www.justkannada.in): ಕುವೆಂಪುನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2022-23ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಎಂ.ಆರ್.ಪ್ರೀತಮ್ ಜೆಇಇ (Joint Entrance Exam- Mains 2023) ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದು, ಅಡ್ವಾನ್ಸ್ಡ್ ಪರೀಕ್ಷೆಗೆ ಅರ್ಹತೆ ಪಡೆದಿದ್ದಾನೆ.

ಭಾರತೀಯ ತಾಂತ್ರಿಕ ಶಿಕ್ಷಣ ಸಂಸ್ಥೆ (ಐಐಟಿ) ಮತ್ತು ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಸಂಸ್ಥೆಯ (ಎನ್ಐಟಿ)  ಪ್ರವೇಶಕ್ಕಾಗಿ ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ನಡೆಸುವ ಜೆಇಇ (ಮೇನ್ಸ್) ಪರೀಕ್ಷೆಯಲ್ಲಿ ತೇರ್ಗಡೆಯಾಗಿ, ಜೆಇಇ (ಅಡ್ವಾನ್ಸ್ಡ್) ಪರೀಕ್ಷೆಗೆ ಸರ್ಕಾರಿ ಕಾಲೇಜಿನಲ್ಲಿ ಓದಿದ ವಿದ್ಯಾರ್ಥಿ ಎಂ.ಆರ್.ಪ್ರೀತಮ್  ಅರ್ಹತೆ ಪಡೆಯುವ ಮೂಲಕ ಸಾಧನೆಗೈದಿದ್ದು, ಇದು ನಮ್ಮ ಕಾಲೇಜಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಪ್ರಾಂಶುಪಾಲ ಚಿದಾನಂದಕುಮಾರ್ ಹರ್ಷ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿ ಎಂ.ಆರ್.ಪ್ರೀತಮ್ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲೂ ಶೇ.97 (ಒಟ್ಟು 600ಕ್ಕೆ 582) ಅಂಕ ಪಡೆದು, ಕಾಲೇಜಿಗೆ ಪ್ರಥಮನಾಗಿದ್ದಾನೆ‌ ಎಂದು ತಿಳಿಸಿದ್ದಾರೆ.

Key words: JEE- Mains – Government College-student-Mysore