ನಂಜನಗೂಡು ತಾಲೂಕಿನಲ್ಲಿ ಮನೆಗಳವು: ನಗದು, ಚಿನ್ನಾಭರಣ ದೋಚಿ ಪರಾರಿ

ಮೈಸೂರು, ಮಾರ್ಚ್ 11, 2020 (www.juskannada.in): ಮನೆ ಹೆಂಚು ತೆಗೆದು ಒಳನುಗ್ಗಿ ಹಣ ಚಿನ್ನಾಭರಣ ಕಳವು ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಕೋಣನೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಆಟೋ ಮಹದೇವಸ್ವಾಮಿ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಳ ನುಗ್ಗಿದ ಕಳ್ಳರು 4 ಸಾವಿರ ನಗದು 40 ಸಾವಿರ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದಾರೆ.

ಈ ಸಂಬಂಧ ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.