Wednesday, October 14, 2026

Dasara Wishes

Happy Dasara
Home Front Page ಜಿಂದಾಲ್ ಗೆ ಸರ್ಕಾರಿ ಭೂಮಿ ಪರಭಾರೆ ವಿಚಾರ: ಮೈಸೂರಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆಗೆ ತಿರುಗೇಟು ನೀಡಿದ...

ಜಿಂದಾಲ್ ಗೆ ಸರ್ಕಾರಿ ಭೂಮಿ ಪರಭಾರೆ ವಿಚಾರ: ಮೈಸೂರಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆಗೆ ತಿರುಗೇಟು ನೀಡಿದ ಸಚಿವ ಎಂ.ಬಿ ಪಾಟೀಲ್..

ಮೈಸೂರು,ಜೂ,17,2019(www.justkannada.in): ಜಿಂದಾಲ್ ಕಂಪನಿಗೆ ಸರ್ಕಾರಿ ಭೂಮಿ ಪರಭಾರೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ತಿರುಗೇಟು ನೀಡಿರುವ ಗೃಹ ಸಚಿವ ಎಂ.ಬಿ ಪಾಟೀಲ್ , ಶೋಭಕ್ಕೆ ಸ್ವಲ್ಪ ತಾಳ್ಮೆಯಿಂದ ಇರಕ್ಕ. ಅವರು ಹೆಣ್ಣುಮಗಳು ಅಂತ ನಾನು ಯಾವ ಪದಗಳನ್ನು ಪ್ರಯೋಗಿಸುತ್ತಿಲ್ಲ ಎಂದು ಟಾಂಗ್ ನೀಡಿದ್ದಾರೆ.

ಮೈಸೂರನಲ್ಲಿ ಇಂದು  ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಜಿಂದಾಲ್ ವಿಚಾರದಲ್ಲಿ ಶೋಭಕ್ಕನಿಗೆ ತಕರಾರಿದ್ದರೆ ಕಮಿಟಿ ಮುಂದೆ ಹೋಗಲಿ.  ಅದಕ್ಕಾಗಿಯೇ ಒಂದು ಕಮಿಟಿ ರಚನೆ ಆಗಿ ಅಲ್ಲಿ ಹೋಗಿ ಮಾತನಾಡಲಿ. ಅದನ್ನು ಬಾಯಿಗೆ ಬಂದಂತೆ ಮಾತನಾಡೋದು ಸರಿಯಲ್ಲ ಎಂದು ಕಿಡಿಕಾರಿದರು.

ನಾವು ಬಿಜಾಪುರದವರು‌ ನಮಗೆ ಬೇರೆ ಪದಗಳೇ ಗೊತ್ತು. ಶೋಭಕರಂದ್ಲಾಜೆಯಂತಹ ಹೆಣ್ಣು ಮಕ್ಕಳ ಬಾಯಲ್ಲಿ ಅಂತ ಪದ ಬರಬಾರದು. ಅವರ ಹಿನ್ನೆಲೆ, ಸಂಸ್ಕಾರ, ಸಂಸ್ಕೃತಿ ಜನರಿಗೆ ಗೊತ್ತಿದೆ. ಅದೆ ನಮ್ಮ ಸಂಸ್ಕಾರ ಹಾಗೂ ಸಂಸ್ಕೃತಿಯು ಜನರಿಗೆ ಗೊತ್ತಿದೆ ಎಂದು ಗೃಹಸಚಿವ ಎಂ.ಬಿ.ಪಾಟೀಲ್ ಹೇಳಿದರು.

IMA ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಗೃಹಸಚಿವ ಎಂ.ಬಿ.ಪಾಟೀಲ್ , ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಕ್ಷಮಿಸುವ ಪ್ರಶ್ನೆಯೇ ಇಲ್ಲ. ಅವರು ಸಚಿವರಾಗಿದ್ದರು ಸರಿ, ಶಾಸಕರಾಗಿದ್ದರು ಸರಿ. ನಮ್ಮ ಇಲಾಖೆ ಪೊಲೀಸರ ಮೇಲೆ‌ ನನಗೆ ನಂಬಿಕೆ ಇದೆ. ಎಸ್.ಐ.ಟಿ. ಇದನ್ನ ಸಮರ್ಪಕವಾಗಿ ನಿಭಾಯಿಸಲಿದೆ. ಸಿಬಿಐಗೆ ಕೊಟ್ಟ ಕೇಸ್‌ಗಳು ಏನಾಗಿವೆ ಅಂತ ನಮಗೆ ಗೊತ್ತಿವೆ. ದಿಢೀರ್‌ನೆ ಬಿಜೆಪಿಯವರಿಗೆ ಸಿಬಿಐ ಮೇಲೆ ನಂಬಿಕೆ ಶುರುವಾಗಿದೆ. ನಮ್ಮ ಮುಂದೆ ಇರೋದು ಹಣ ಕಳೆದುಕೊಂಡವರಿಗೆ ಹಣ ವಾಪಸ್ ಕೂಡಿಸೋದು. ವಂಚನೆಕಾರರ ಆಸ್ತಿ ಜಪ್ತಿ ಮಾಡೋದು. ಇಂತಹ ಬೇರೆ ಕಂಪನಿಗಳ ತಲೆ ಎತ್ತದಂತೆ ನೋಡಿಕೊಳ್ಳೋದು. ಆ ಕೆಲಸ ನಾವೆಲ್ಲಾ ಕೆಲಸ ಮಾಡುತ್ತಿದ್ದೇವೆ. ಚಾರ್ಜ್‌ಶೀಟ್ ಆಗದೆ ಯಾರ್ಯಾರ ಹೆಸರನ್ನೋ ಹೇಳೋದು ಸರಿಯಲ್ಲ ಎಂದು ಬಿಜೆಪಿ ನಾಯಕರಿಗೆ ಟಾಂಗ್ ನೀಢಿದರು.

ಗುಂಡ್ಲುಪೇಟೆ ಯುವಕನ ಬೆತ್ತಲೆ ಪ್ರಕರಣ ಸಂಬಂಧ ಮಾತನಾಡಿದ ಎಂ.ಬಿ ಪಾಟೀಲ್, ಈಗಾಗಲೇ ಐಜಿಪಿ ಜೊತೆ ನಾನೇ ಮಾತಾಡಿದ್ದೇನೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಯಾರೇ ತಪ್ಪಿತಸ್ಥಾರಾಗಿದ್ದರೂ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

Key words: jindalcompany-mysore –minister -Mb Patil- Shobha Karandlaje