ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ: 1,346 ಅಭ್ಯರ್ಥಿಗಳು ಆಯ್ಕೆ

ಮೈಸೂರು, ಅಕ್ಟೋಬರ್,17,2025 (www.justkannada.in):  ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಡೆದ ಬೃಹತ್ ಉದ್ಯೋಗ ಮೇಳದಲ್ಲಿ 1,346 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಮೈಸೂರಿನಲ್ಲಿ ಆಯೋಜಿಸಿದ್ದ ಯುವ ಸಮೃದ್ಧಿ ಉದ್ಯೋಗ ಮೇಳವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.

ಉದ್ಯೋಗ ಮೇಳದಲ್ಲಿ ಒಟ್ಟು 235 ಕಂಪನಿಗಳು,13,289 ಅಭ್ಯರ್ಥಿಗಳು ಪಾಲ್ಗೊಂಡಿದ್ದರು. ಈ ಅಭ್ಯರ್ಥಿಗಳ ಪೈಕಿ 3,303 ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡಲಾಗಿತ್ತು. ಇದರಲ್ಲಿ 1,346 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಆಯ್ಕೆಯಾಗಿದ್ದಾರೆ.

Key words: Huge, job fair, Mysore, 1,346 candidates, selected