ನೌಕರಿ ಬೇಕು ಅಂದರೇ  ಯುವತಿಯರು ಮಂಚ ಹತ್ತಬೇಕು, ಯುವಕರು ಲಂಚಕೊಡಬೇಕು-ಶಾಸಕ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ.

 ಕಲಬುರ್ಗಿ,ಆಗಸ್ಟ್,12,2022(www.justkannada.in): ಸರ್ಕಾರಿ ನೌಕರಿ ಬೇಕು ಅಂದರೆ  ಯುವತಿಯರು ಮಂಚ ಹತ್ತಬೇಕು. ಯುವಕರು ಲಂಚ ಕೊಡಬೇಕು  ಎಂದು ಶಾಸಕ ಪ್ರಿಯಾಂಕ್ ಖರ್ಗೆ  ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಅವರು, ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಾಗುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಉದ್ಯೋಗ ದೃಷ್ಟಿಯಲ್ಲಿ ಸರ್ಕಾರ ಶೂನ್ಯವಾಗಿದೆ. ಇದು ಲಂಚ-ಮಂಚದ ಸರ್ಕಾರ ಎಂದು ಟೀಕಿಸಿದರು.

ಇದೀಗ ಖಾಲಿಯಾಗಿರುವ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡುತ್ತಿಲ್ಲ. ಸಚಿವ ಪ್ರಭು ಚೌಹಾನ್ ಆಪ್ತ ಜ್ಞಾನದೇವ ಜಾಧವ್ ಅನೇಕ ಹುದ್ದೆಗಳನ್ನು ಕೊಡಿಸುವದಾಗಿ ಹೇಳಿ ಎಲ್ಲರನ್ನೂ ವಂಚಿಸಿದ್ದಾರೆ. ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿ ಹುದ್ದೆಗಳ ನೇಮಕಾತಿಯಲ್ಲಿಯೂ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿದರು.

Key words: job- young women – MLA-Priyank Kharge’s -controversial -statement.