ಕೆ ಎಸ್ ಆರ್ ಟಿ ಸಿಯಿಂದ ಜೋಗ ಜಲಪಾತ ಟೂರ್ ಪ್ಯಾಕೇಜ್

ಬೆಂಗಳೂರು, ಜುಲೈ 18, 2021 (www.justkannada.in): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಬೆಂಗಳೂರು ಟು ಜೋಗ ಜಲಪಾತ ಟೂರ್ ಪ್ಯಾಕೇಜ್ ಘೋಷಿಸಿದೆ.

ಬೆಂಗಳೂರು ಕೇಂದ್ರೀಯ ವಿಭಾಗದಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು – ಜೋಗ ಜಲಪಾತ ವಯಾ ಶಿವಮೊಗ್ಗ, ಸಾಗರ ಮಾರ್ಗವಾಗಿ ನಾನ್ ಎಸಿ ಸ್ಲೀಪರ್ ವಾಹನದೊಂದಿಗೆ ವಾರಾಂತ್ಯದ ದಿನಗಳಲ್ಲಿ (ಶುಕ್ರವಾ ಮತ್ತು ಶನಿವಾರ) ಟೂರ್ ಪ್ಯಾಕೇಜ್  23-07-2021ರಿಂದ ಪ್ರಾರಂಭವಾಗಲಿದೆ.

ಕೆ ಎಸ್ ಆರ್ ಟಿ ಸಿ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಲತಾ ಟಿ.ಎಸ್ ಈ ಕುರಿತು ಮಾಹಿತಿ ನೀಡಿದ್ದಾರೆ.

ಪ್ಯಾಕೇಜ್ ಟೂರ್ ವೇಳಾಪಟ್ಟಿ ಹಾಗೂ ಸಾರಿಗೆಯ ಪ್ರಯಾಣ ದರದ ವಿವರಕ್ಕೆ ಕೆಎಸ್ ಆರ್ ಟಿಸಿ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.