ಮೃತ ಪತ್ರಕರ್ತನ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ಮಂಜೂರು ಮಾಡಿದ ಸಿಎಂ ಬೊಮ್ಮಾಯಿ.

ಬೆಂಗಳುರು,ಮೇ,21,2022(www.justkannada.in): ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೆರೆಗೆ ವಿಜಯಪುರ ಕನ್ನಡಮ್ಮ ಪತ್ರಿಕೆಯ ಧನಕುಮಾರ್ ಧನಶೆಟ್ಟಿ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 1 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.

ಹಿರಿಯ ಪತ್ರಕರ್ತ ಧನ್ಯಕುಮಾರ್ ಅವರು ಮೃತಪಟ್ಟ ಬಳಿಕ ಅವರ ಕುಟುಂಬ ಸಂಕಷ್ಟದಲ್ಲಿರುವ ಬಗ್ಗೆ ವಿಜಯಪುರ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಕೆಯುಡಬ್ಲ್ಯೂಜೆ ರಾಜ್ಯ ಘಟಕಕ್ಕೆ ಮನವಿ ಮಾಡಿತ್ತು. ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಮನವಿ ಮೇರೆಗೆ, ಸಿಎಂ ಬಸವರಾಜ ಬೊಮ್ಮಾಯಿ ಅವರು ಪರಿಹಾರ ಮಂಜೂರು ಮಾಡಿದ್ದಾರೆ.

ಪರಿಹಾರ ಮಂಜೂರು ಮಾಡಲು ಆದೇಶಿಸಿದ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ)ದ ಕೃತಜ್ಞತೆಗಳನ್ನು ಸಲ್ಲಿಸಿದೆ.

Key words: journalist- family – 1 lakh – granted -CM Bommai.