Saturday, November 7, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ರಾಜ್ಯಕ್ಕೆ ಜೆಪಿ ನಡ್ಡಾ ಆಗಮನ: ಕಾಂಗ್ರೆಸ್ , ಜೆಡಿಎಸ್ ಗೆ ಟ್ವೀಟ್ ಮಾಡಿ ಟಾಂಗ್ ಕೊಟ್ಟ...

ರಾಜ್ಯಕ್ಕೆ ಜೆಪಿ ನಡ್ಡಾ ಆಗಮನ: ಕಾಂಗ್ರೆಸ್ , ಜೆಡಿಎಸ್ ಗೆ ಟ್ವೀಟ್ ಮಾಡಿ ಟಾಂಗ್ ಕೊಟ್ಟ ಬಿಜೆಪಿ

ಬೆಂಗಳೂರು,ಜನವರಿ,5,2022(www.justkannada.in): ಗುಡ್‌ ಮಾರ್ನಿಂಗ್‌ ನಮ್ಮ ನಮ್ಮ ಪಕ್ಷದ ರಾಷ್ಟ್ರಾಧ್ಯಕ್ಷರಾದ ಜೆಪಿ ನಡ್ಡಾ ರವರು ರಾಜ್ಯಕ್ಕೆ ಬಂದಿಳಿದಿದ್ದಾರೆ. ಇದು ಸಹಜವಾಗಿಯೇ ತಮಗೆಲ್ಲ ಕಳವಳವಾಗಿರುವುದರಿಂದ, ತಮ್ಮ ಟೂಲ್‌ ಕಿಟ್‌ಗಳನ್ನು ಹೊರ ತೆಗೆದು ಬಿಜೆಪಿ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಮಾಡಲು ಧಾರಾಳವಾಗಿ ಪ್ರಯತ್ನಿಸಬಹುದು ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ರಾಜ್ಯ ಬಿಜೆಪಿ ಟ್ವಿಟ್ಟರ್ ನಲ್ಲಿ ಕುಟುಕಿದೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಈಗಾಗಲೇ ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆಯ 24ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವನ್ನು ಭದ್ರಪಡಿಸಿಕೊಳ್ಳುತ್ತಿರುವ ಬಿಜೆಪಿಯನ್ನು ತಡೆಯಬೇಕಾದ್ದು ವಿರೋಧ ಪಕ್ಷಗಳು ಅಗತ್ಯವಾಗಿ ಮಾಡಲೇ ಬೇಕಾದ ಕರ್ಮ. ಆದರೆ ಇದು ಅವರ ವಿಫಲಯತ್ನವಾಗುವುದಂತೂ ಕಟ್ಟಿಟ್ಟ ಬುತ್ತಿ.

ಕಾಂಗ್ರೆಸ್‌ ಮತ್ತು ಜೆಡಿಎಸ್‌ ನವರ ಟೂಲ್‌ ಕಿಟ್‌ ಗಳು ಸಹಜವಾಗಿ ಪ್ರಾದೇಶಿಕತೆ, ಭಾಷೆ, ಜಾತಿ, ಧರ್ಮಗಳನ್ನು ಅವಲಂಬಿಸಿದ್ದು ಇಂಥದ್ದೇ ಯಾವುದಾದರೂ ಸುಳ್ಳು ಸುದ್ದಿಗಳನ್ನು ಹರಿಬಿಡುವುದನ್ನೇ ನಾವು ಎದುರು ನೋಡುತ್ತಿದ್ದೇವೆ. ಆದರೆ ಅವೆಲ್ಲಕ್ಕೂ ನಮ್ಮ ಒಂದೇ ಉತ್ತರವಾಗಿ ನಾವು ಮಾತಾಡಲ್ಲ, ರಾಜ್ಯದ ಅಭಿವೃದ್ಧಿ ಮಾತಾಡುತ್ತದೆ.ರಾಜ್ಯಕ್ಕೆ ಜೆಪಿ ನಡ್ಡಾ ಆಗಮನ: ಕಾಂಗ್ರೆಸ್ , ಜೆಡಿಎಸ್ ಗೆ ಟ್ವೀಟ್ ಮಾಡಿ ಟಾಂಗ್...

ಸ್ಮಾರ್ಟ್‌ ಸಿಟಿ ಯೋಜನೆಯಡಿ ದಾವಣಗೆರೆ, ತುಮಕೂರಿನಲ್ಲಿ ಆಗಿರುವ ಅಭಿವೃದ್ಧಿಯನ್ನು ಕಾಂಗ್ರೆಸ್ಸು ಕನಸ್ಸಲ್ಲೂ ಕಾಣುವುದಕ್ಕಾಗುವುದಿಲ್ಲ. ಹಾಗೇ ಚಿತ್ರದುರ್ಗದಲ್ಲಿ 1,96,093 ಮನೆಗಳಿಗೆ ಕುಡಿಯುವ ನೀರು ಪೂರೈಕೆ ಎಂಬುದೆಲ್ಲ ಏನೆಂದೂ ಜಾತಿಹುಳು ಜೆಡಿಎಸ್‌ ನ ಜಡಮಂಡೆಗೆ ಅರ್ಥವೂ ಆಗುವುದಿಲ್ಲ ಎಂದು ಜೆಡಿಎಸ್ ವಿರುದ್ದ ಬಿಜೆಪಿ ಕಿಡಿಕಾರಿದೆ.

ಕಾಂಗ್ರೆಸ್‌ ಮತ್ತು ಜೆಡಿಎಸ್‌ಗೆ ನಮ್ಮ ಒಂದೇ ಒಂದು ಕೋರಿಕೆಯೇನೆಂದರೆ, ಧಾವಂತದಲ್ಲಿ ನಂದಿನಿ-ಅಮುಲ್‌ ಬಗ್ಗೆ ಸುಳ್ಳಾಡಿದಂತೆ ಮತ್ತೊಮ್ಮೆ ಸುಳ್ಳಾಡಿ, ಉಳಿದಿರುವ ನಿಮ್ಮ ಅಲ್ಪ ಸ್ವಲ್ಪ ಮರ್ಯಾದೆಯನ್ನೂ ತೆಗೆದುಕೊಳ್ಳಬೇಡಿ. ಸುಳ್ಳು ನಾಳೆಯೂ ಆಡಬಹುದು, ಮರ್ಯಾದೆ ಮತ್ತೆ ಬರುವುದಿಲ್ಲ ಎಂದು ಟಾಂಗ್ ನೀಡಿದೆ.

Key words: JP Nadda- arrival – state-BJP – tong -Congress – JDS