“ನ್ಯಾಯದೇವತೆಯಲ್ಲಿ ನಮಗೆ ನಂಬಿಕೆಯಿದೆ, ರಮೇಶ್ ಜಾರಕಿಹೊಳಿ ಆರೋಪ ಮುಕ್ತರಾಗುತ್ತಾರೆ” : ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು,ಮಾರ್ಚ್,29,2021(www.justkannada.in) : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರೋಪ ಮುಕ್ತರಾಗುತ್ತಾರೆ. ನ್ಯಾಯದೇವತೆಯಲ್ಲಿ ನಮಗೆ ನಂಬಿಕೆಯಿದೆ. ಕಷ್ಟದಲ್ಲಿದ್ದಾಗ ಸ್ನೇಹಿತರನ್ನು ಭೇಟಿಯಾಗಿ ಧೈರ್ಯ ತುಂಬುವುದು ಸರ್ವೇ ಸಾಮಾನ್ಯ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.Government,Social,Economic,Educational,survey,Report,Should,receive,Former CM,Siddaramaiah ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದಾಶಿವನಗರದ ನಮ್ಮ ಎದುರು ಮನೆಯಲ್ಲಿಯೇ ರಮೇಶ್ ಜಾರಕಿಹೊಳಿ ಇದ್ದಾರೆ. ನಾವು, ಅವರು ಹಲವಾರು ವರ್ಷಗಳಿಂದ  ಸ್ನೇಹಿತರು. ಈಗ ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. ಕಷ್ಟದಲ್ಲಿದ್ದಾಗ ಸಹಾಯಕ್ಕೆ ಹೋಗುವುದು ಮನುಷ್ಯನ ಧರ್ಮ. ಯಾರೇ ತಪ್ಪು ಮಾಡಿದರೂ ತಪ್ಪು. ಕಾನೂನು ಯಾರನ್ನೂ ಬಿಡುವುದಿಲ್ಲ. ನೊಂದವರಿಗೆ ನ್ಯಾಯ ಸಿಗಲಿ ಎಂದಿದ್ದಾರೆ.

ಜಾರಕಿಹೊಳಿಯನ್ನು ಭೇಟಿಯಾಗಿದ್ದಕ್ಕೆ ಯಾವುದೇ ವಿಶೇಷ ಅರ್ಥ ಬೇಡ

1st,9th grade,Cancel,Examination,Final,decision,tomorrow,Minister,Dr.K.Sudhakar

ನ್ಯಾಯ ಯಾರ ಕಡೆ ಇದೆಯೋ ಅವರಿಗೆ ನ್ಯಾಯ ಸಿಗಬೇಕು. ಈಗಾಗಲೇ ಎಸ್‍ಐಟಿ ತನಿಖೆ ನಡೆಸುತ್ತಿರುವುದರಿಂದ ಈ ಹಂತದಲ್ಲಿ ನಾನು ಏನು ಹೇಳುವುದಿಲ್ಲ. ಜಾರಕಿಹೊಳಿಯನ್ನು ಭೇಟಿಯಾಗಿದ್ದಕ್ಕೆ ಯಾವುದೇ ವಿಶೇಷ ಅರ್ಥ ಬೇಡ. ಒಂದೇ ಪಕ್ಷದಲ್ಲಿದ್ದೇವೆ. ಅವರ ಕಷ್ಟಸುಖಗಳಿಗೆ ಸ್ಪಂದಿಸುವುದು ನಮ್ಮ ಜವಾಬ್ದಾರಿಯೂ ಹೌದು ಎಂದು ಸ್ಪಷ್ಟಪಡಿಸಿದ್ದಾರೆ.

key words : judgment-faith-Ramesh Zarakiholi-Accused-Free-Minister-Dr.K. Sudhakar