ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ…

ಧಾರವಾಡ,ಫೆಬ್ರವರಿ,4,2021(www.justkannada.in):  ಜಿ.ಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಂಗ ಬಂಧನ ಅವಧಿಯನ್ನ ಕೋರ್ಟ್ ಮತ್ತೆ ವಿಸ್ತರಿಸಿದೆ.jk

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ಇಂದು ವಿನಯ್ ಕುಲಕರ್ಣಿ  ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡಿತ್ತು, ಈ ಹಿನ್ನೆಲೆಯಲ್ಲಿ ಧಾರವಾಡದ ಸಿಬಿಐ ವಿಶೇಷ ಕೋರ್ಟ್ ಗೆ ವಿನಯ್ ಕುಲಕರ್ಣಿ ಅವರನ್ನ  ಹಾಜರು ಪಡಿಸಲಾಗಿತ್ತು.Judicial custody -extended -former minister -Vinay Kulkarni

ಪ್ರಕರಣ  ಸಂಬಂಧ ವಿಚಾರಣೆ ನಡೆಸಿದ ನ್ಯಾಯಪೀಠ, ಮತ್ತೆ ಫೆಬ್ರವರಿ 19ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಸ್ತರಣೆ ಮಾಡಿ ಆದೇಶಿಸಿದೆ. ಈ ಮೂಲಕ ಮಾಜಿ ಸಚಿವ ವಿನಯ್ ಕುಲಕರ್ಣಿಗೆ  ಮತ್ತೆ ಜೈಲೆ ಗತಿಯಾಗಿದೆ.

Key words: Judicial custody -extended -former minister -Vinay Kulkarni