ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ.

ಬೆಂಗಳೂರು,ಜೂನ್,18,2024 (www.justkannada.in):  ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ  ಹಾಸನ ಮಾಜಿ ಸಂಸದ  ಪ್ರಜ್ವಲ್ ರೇವಣ್ಣಗೆ  ನ್ಯಾಯಾಂಗ ಬಂಧನ ವಿಧಿಸಿ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಹೊಳೇನರಸೀಪುರ ಮತ್ತು ಕೆಆರ್ ನಗರ ದಾಖಲಾಗಿರುವ ಪ್ರಕರಣ  ಕುರಿತು  ಎಸ್ ಐಟಿ ತನಿಖೆ  ನಡೆಸುತ್ತಿದ್ದು ಇಂದು ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣರನ್ನ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.

ಇದೀಗ 42ನೇ ಎಸಿಎಂಎಂ ಕೋರ್ಟ್  ಪ್ರಜ್ವಲ್ ರೇವಣ್ಣಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ ಎನ್ನಲಾಗಿದೆ. ಈ ಮೂಲಕ ಪ್ರಜ್ವಲ್ ರೇವಣ್ಣ ಜೈಲುಪಾಲಾಗಿದ್ದಾರೆ.

Key words: Judicial custody, former MP, Prajwal Revanna