Wednesday, August 5, 2026

BDA Apartments

Home Front Page ಬಿಜೆಪಿ ಅವಧಿಯ ಕೋವಿಡ್ ಹಗರಣದ ಬಗ್ಗೆ ನ್ಯಾಯಾಂಗ ತನಿಖೆಗೆ  ಚಿಂತನೆ- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್..

ಬಿಜೆಪಿ ಅವಧಿಯ ಕೋವಿಡ್ ಹಗರಣದ ಬಗ್ಗೆ ನ್ಯಾಯಾಂಗ ತನಿಖೆಗೆ  ಚಿಂತನೆ- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್..

ಬೆಂಗಳೂರು,ಜುಲೈ,31,2023(www.justkannada.in):  ಬಿಜೆಪಿ ಅವಧಿಯ ಕೋವಿಡ್ ಹಗರಣಗಳ ಬಗ್ಗೆ ತನಿಖೆ ನಡೆಸುವುದು ನಿಶ್ಚಿತ.  ಕೋವಿಡ್ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವ ಚಿಂತನೆ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನ್ಯಾಯಾಂಗ ತನಿಖೆ ವಿಚಾರವನ್ನು ಸಿಎಂ ಮುಂದೆ ಪ್ರಸ್ತಾಪಿಸಿದ್ದೇವೆ. ಸಾರ್ವಜನಿಕರ ಹಣ ದುರುಪಯೋಗದ ಬಗ್ಗೆ ವರದಿ ಬಂದಿದೆ. ಕೊರೊನಾ ಹಗರಣದ ಬಗ್ಗೆ ತನಿಖೆ ನಡೆಸುವುದು ನಿಶ್ಚಿತ ಎಂದರು.

ಇನ್ನು ಇಂದು ಸಚಿವ ದಿನೇಶ್ ಗುಂಡೂರಾವ್ ಸಿಟಿ ರೌಂಡ್ಸ್ ಹಾಕುತ್ತಿದ್ದು ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಮಾತನಾಡಿರುವ ಅವರು,  ನಾನು ಆಸ್ಪತ್ರೆಗೆ ಬೇಟಿ ಕೊಟ್ಟಿದ್ದೇನೆ. ಇಲ್ಲಿ ಸ್ವಚ್ಚತೆ, ಡಾಕ್ಟರ್​ಗಳ ಹಾಜರಾತಿ ಬಗ್ಗೆ ಸಾಮಾಜಿಕ ಕಾರ್ಯಕರ್ತನ ಮೂಲಕ ದೂರು ಬಂದಿತ್ತು. ವಿಧಾನಸಭೆಯಲ್ಲಿ ಜಯನಗರ ಆಸ್ಪತ್ರೆಗೆ ಭೇಟಿ ನೀಡುತ್ತೇನೆ ಎಂದಿದ್ದೆ. ಆದೇ ರೀತಿ ಇಂದು ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಇನ್ನು ಆಸ್ಪತ್ರೆ ಪರಿಶೀಲನೆ ನಡೆಸುತ್ತಿದ್ದೇನೆ. ದಿಢೀರ್ ಭೇಟಿ ಕೊಡುವುದನ್ನು ಮುಂದಿನ ದಿನಗಳಲ್ಲಿ ಮಾಡುತ್ತೇನೆ. ಹೊರಗಿನಿಂದ ಬಂದು ಆಸ್ಪತ್ರೆಯಲ್ಲಿ ಹಸ್ತಕ್ಷೇಪ ಮಾಡುವುದು ತಪ್ಪು. ಏನೆಲ್ಲಾ ತೊಂದರೆ ಆಗುತ್ತಿದೆ ಅದಕ್ಕೆ ಅಗತ್ಯ ಕ್ರಮಗಳನ್ನ ತೆಗೆದುಕೊಳ್ಳುತ್ತೇವೆ ಎಂದು  ಹೇಳಿದರು.

Key words: judicial inquiry – BJP- Covid scam-Health Minister -Dinesh Gundurao.