ನವದೆಹಲಿ,ಮೇ,14,2025 (www.justkannada.in): ಸುಪ್ರೀಂ ಕೋರ್ಟ್ ನ 52ನೇ ಮುಖ್ಯ ನ್ಯಾಯಮೂರ್ತಿಯಾಗಿ `ಬಿ.ಆರ್.ಗವಾಯಿ ಅವರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು.
ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರು ನಿನ್ನೆ ನಿವೃತ್ತರಾದರು. ಇದೀಗ ಇಂದು ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಾಧೀಶ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ (ಬಿಆರ್) ಗವಾಯಿ ಅವರು ಭಾರತದ ನೂತನ ಮುಖ್ಯನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬಿ.ಆರ್ ಗವಾಯಿ ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿ ಹಲವರು ಉಪಸ್ಥಿತರಿದ್ದರು.
Key words: Justice, B.R. Gavai, takes oath , Chief Justice, Supreme Court