ಬೆಂಗಳೂರು,ಜನವರಿ,29,2026 (www.justkannada.in): ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಇಂಧನ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಬೇಸರಗೊಂಡು ಸಚಿವ ಕೆ.ಜೆ ಜಾರ್ಜ್ ರಾಜೀನಾಮೆಗೆ ಮುಂದಾಗಿದ್ದರು ಎಂಬ ಸುದ್ದಿ ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಸಚಿವ ಕೆ.ಜೆ ಜಾರ್ಜ್ ರಾಜೀನಾಮೆ ಕೊಟ್ಟಿಲ್ಲ. ಸಚಿವ ಜಾರ್ಜ್ ಅವರೇ ಸ್ಪಷ್ಟನೆ ನೀಡಿದ್ದಾರೆ. ಸಚಿವ ಕೆಜೆ ಜಾರ್ಜ್ ರಾಜೀನಾಮೆ ಎಂಬುದು ಸುಳ್ಳು ಎಂದು ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ್ದ ಸಚಿವ ಕೆ.ಜೆ ಜಾರ್ಜ್, ನಾನು ರಾಜೀನಾಮೆ ನೀಡಿಲ್ಲ. ಸಚಿವರು ರಾಜೀನಾಮೆ ಕೊಡೋದು ಅಷ್ಟು ಸುಲಭವೇ ಯತೀಂದ್ರ ನಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ. ಅವರು ಒಳ್ಳೆಯವರು ಎಂದಿದ್ದರು.
Key words: Minister, K.J. George, resignation, CM Siddaramaiah







