Saturday, September 19, 2026

BDA Apartments

ಇಸ್ರೋ ಮಾಜಿ ಅಧ್ಯಕ್ಷ ಕೆ. ಕಸ್ತೂರಿ ರಂಗನ್ ನಿಧನ BDA JK_Adv BDA Adv
Home Front Page ಇಸ್ರೋ ಮಾಜಿ ಅಧ್ಯಕ್ಷ ಕೆ. ಕಸ್ತೂರಿ ರಂಗನ್ ನಿಧನ

ಇಸ್ರೋ ಮಾಜಿ ಅಧ್ಯಕ್ಷ ಕೆ. ಕಸ್ತೂರಿ ರಂಗನ್ ನಿಧನ

ಬೆಂಗಳೂರು,ಏಪ್ರಿಲ್,25,2025 (www.justkannada.in):  ಇಸ್ರೋ ಮಾಜಿ ಅಧ್ಯಕ್ಷ ಕೆ. ಕಸ್ತೂರಿ ರಂಗನ್ ಅವರು ಇಂದು ನಿಧನರಾಗಿದ್ದಾರೆ.

ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಸ್ತೂರಿ ರಂಗನ್ ಅವರು ಇಂದು ಬೆಂಗಳೂರಿನ ಕೊಡಿಗೇನಹಳ್ಳಿ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕಸ್ತೂರಿ ರಂಗನ್ ಅವರಿಗೆ 84 ವರ್ಷ ವಯಸ್ಸಾಗಿತ್ತು.

1994ರಿಂದ 2003ರವರೆಗೆ  ಇಸ್ರೋ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಕಸ್ತೂರಿ ರಂಗನ್ ಅವರು,  ಅನೇಕ ರಾಕೆಟ್‌ ಗಳ ಉಡಾವಣೆ, ಭಾರತದಲ್ಲಿ ವಿಜ್ಞಾನ, ತಂತ್ರಜ್ಞಾನ ಹಾಗೂ ಇಸ್ರೋ ಬೆಳವಣಿಗೆಯಲ್ಲಿ ಅಪಾರ ಕೊಡುಗೆ ನೀಡಿದ್ದಾರೆ.

ಭಾನುವಾರ ಬೆಳಗ್ಗೆ ಕಸ್ತೂರಿ ರಂಗನ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.  ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಅಂದು ಬೆಳಿಗ್ಗೆ 10ರಿಂದ 12ರವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Former ISRO Chairman, K. Kasturirangan, passes away