ರೋಗಿಗಳಿಗೆ ಉತ್ತಮ ಚಿಕಿತ್ಸೆ ಜೊತೆಗೆ ಸೌಜನ್ಯವಾಗಿ ವರ್ತಿಸಿ- ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ

ಮೈಸೂರು, ಆಗಸ್ಟ್,2,2025 (www.justkannada.in): ಉಪಲೋಕಾಯುಕ್ತ ಕೆ.ಎನ್. ಫಣೀಂದ್ರ ಅವರು ಮೂರನೇ ದಿನದ ನಗರ ಸಂಚಾರದಲ್ಲಿ ಶನಿವಾರ ಕೆ.ಆರ್. ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದಲ್ಲದೇ ಪರಿಶೀಲನೆ ನಡೆಸಿದರು.

ಆಸ್ಪತ್ರೆಯ ಪ್ರತಿ ವಾರ್ಡ್ ಗಳಿಗೆ ತೆರಳಿ ಸರಿಯಾಗಿ ಚಿಕಿತ್ಸೆ ದೊರೆಯುತಿದೆಯೇ, ಶೌಚಾಲಯ,ಊಟದ ವ್ಯವಸ್ಥೆ ಸರಿಯಾಗಿದೆಯೇ? ಎಂದು ರೋಗಿಗಳಿಂದ ಮಾಹಿತಿ ಪಡೆದುಕೊಂಡರು. ಎಕ್ಸರೇ ಸ್ಕ್ಯಾನಿಂಗ್, ರಕ್ತ ಪರೀಕ್ಷೆ ವೈದ್ಯರ ಬಗ್ಗೆ ವಿಚಾರಿಸಿದರು.

ಕುಡಿಯುವ ನೀರಿನ ವ್ಯವಸ್ಥೆ, ಊಟದ ವ್ಯವಸ್ಥೆ, ಶೌಚಾಲಯ ಹಾಗೂ ಆಸ್ಪತ್ರೆಯ ಸ್ವಚ್ಛತೆ ಬಗ್ಗೆ ತಾವೇ ಖುದ್ಧಾಗಿ ವೀಕ್ಷಣೆ ಮಾಡಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರ ಜೊತೆಗೆ ಸೌಜನ್ಯವಾಗಿ ವರ್ತಿಸಬೇಕು ಎಂದು ಕೆ.ಎಂ ಫಣೀಂದ್ರ ಸಲಹೆ ನೀಡಿದರು.

ಆಸ್ಪತ್ರೆಯ ಅವ್ಯವಸ್ಥೆಗಳನ್ನು ಪರಿಶೀಲಿಸಿ ಮತ್ತು ರೋಗಿಗಳ ದೂರುಗಳನ್ನು ಆಲಿಸಿದ ಫಣೀಂದ್ರ ಅವರು. ಹಣಕ್ಕೆ ಬೇಡಿಕೆಯಿಡುವುದು, ಸ್ವಚ್ಛತೆಯ ಕೊರತೆ, ಮತ್ತು ಡಿ ಗ್ರೂಪ್ ಕೊರತೆ ಸೇರಿದಂತೆ ಹಲವು ಸಮಸ್ಯೆಗಳನ್ನು ಗುರುತಿಸಿದರು.

ಈ ಸಂದರ್ಭದಲ್ಲಿ ಮಾತನಾಡಿ ರೋಗಿಗಳಿಂದ ಅಹವಾಲು ಸ್ವೀಕರಿಸಿದ ಉಪ ಲೋಕಾಯುಕ್ತ ಕೆ.ಎನ್ ಫಣೀಂದ್ರ ಅವರು, ರೋಗಿಗಳಿಂದ ಚಿಕಿತ್ಸೆಗಾಗಿ ದುಡ್ಡು ಸ್ವೀಕರಿಸಿದರೆ ಆಸ್ಪತ್ರೆಯಲ್ಲಿನ ಸಿಬ್ಬಂದಿಗಳ ಮೇಲೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸ್ವಚ್ಚತೆ ಆದ್ಯತೆ ನೀಡಬೇಕು

ಆಸ್ಪತ್ರೆಯಲ್ಲಿನ ಸ್ವಚ್ಚತೆಯ ಬಗ್ಗೆ ಸಾರ್ವಜನಿರಿಂದ ಮಾಹಿತಿ ಪಡೆದು ಸ್ವಚ್ಚತೆಯಿಂದ ಆಸ್ಪತ್ರೆ ಇರಬೇಕು. ಆಸ್ಪತ್ರೆಯಲ್ಲಿನ ಸಿಬ್ಬಂದಿಗಳು ರೋಗಿಗಳ ಜೊತೆ ಸೌಜನ್ಯದಿಂದ ವರ್ತಿಸಬೇಕು ಎಂದು ಅವರು ತಿಳಿಸಿದರು.

ಆಸ್ಪತ್ರೆಯಲ್ಲಿ ತಪಾಸಣೆ ಸಂದರ್ಭದಲ್ಲಿ ಆಸ್ಪತ್ರೆಯ ಒಳಗೆ ನಾಯಿ ಇರುವುದನ್ನು ಕಂಡು ಇದರ ಬಗ್ಗೆ ಆಸ್ಪತ್ರೆಯ ಅಧಿಕಾರಿಗಳಿಗೆ ಪ್ರಶ್ನಿಸಿದರು. ಈ ರೀತಿ ಆದರೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪಲೋಕಾಯುಕ್ತ ಕೆ.ಎನ್ ಫಣೀಂದ್ರ ಎಚ್ಚರಿಸಿದರು.

ಈ ಭೇಟಿಯಲ್ಲಿ ಆಸ್ಪತ್ರೆಯಲ್ಲಿನ ಅವ್ಯವಸ್ಥೆಗಳು ಮತ್ತು ಆಸ್ಪತ್ರೆಯಲ್ಲಿನ ಸಿಬ್ಬಂದಿಗಳು ರೋಗಿಗಳಿಂದ ಹಣಕ್ಕೆ ಬೇಡಿಕೆಯಿಟ್ಟ ಬಗ್ಗೆ ದೂರುಗಳು ಕೇಳಿಬಂದವು. ಈ  ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಲೋಕಾಯುಕ್ತರು ತಿಳಿಸಿದರು.

ಈ ವೇಳೆ ಸ್ಥಳದಲ್ಲಿದ್ದ ಮೈಸೂರು ಮೆಡಿಕಲ್‌ ಕಾಲೇಜು ಡೀನ್‌ ಹಾಗೂ ನಿರ್ದೇಶಕರಾದ ದಾಕ್ಷಾಯಿಣಿ ಅವರನ್ನು ಪ್ರಶ್ನಿಸಿ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷೀಕಾಂತ ರೆಡ್ಡಿ,  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್, ಆರ್. ಆಸ್ಪತ್ರೆಯ  ನಿವಾಸಿ ವೈದ್ಯಾಧಿಕಾರಿ (ಆರ್‌ಎಂಒ) ಡಾ. ನಯಾಜ್ ಪಾಷಾ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.vtu

Key words: Deputy Lokayukta, K.N. Phanindra, Mysore, KR Hospital