Thursday, September 17, 2026

BDA Apartments

ಬೈಕ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ...
Home Crime ಬೈಕ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಮೈಸೂರು,ಮಾ,12,2020(www.justkannada.in): ಬೈಕ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲ್ಲೂಕಿನಲ್ಲಿ ನಡೆದಿದೆ.

ಕೆ.ಆರ್.ನಗರ ತಾಲೂಕಿನ ಚಿಕ್ಕಹನಸೋಗೆ ಗೇಟ್ ಬಳಿ ಈ ಘಟನೆ ನಡೆದಿದೆ.  ಹನಸೋಗೆ ಗ್ರಾಮದ ಜವರೇಗೌಡ (62)ಮೃತಪಟ್ಟವರು. ಘಟನೆ ನಡೆಯುತ್ತಿದ್ದಂತೆ ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಕೆ.ಆರ್.ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಈ ಕುರಿತು ಪ್ರಕರಣ ದಾಖಲಾಗಿದೆ.

Key words:  k.r nagar- collision- between – bike – tipper- bike rider -dies