ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೇಲೆ ಚಪ್ಪಲಿ ಎಸೆತ ಕೇಸ್: ನಾಲ್ವರು ಜೆಡಿಎಸ್ ಕಾರ್ಯಕರ್ತರ ಬಂಧನ: ಬಿಡುಗಡೆ….

ಕೆ.ಆರ್,ಪೇಟೆ,ನ,19,2019(www.justkannada.in): ನಾಮಪತ್ರ ಸಲ್ಲಿಸುವ ವೇಳೆ ಕೆ.ಆರ್ ಪೇಟೆ ಬಿಜೆಪಿ ಅಭ್ಯರ್ಥಿ ನಾರಾಯಣಗೌಡರ ಮೇಲೆ ಚಪ್ಪಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಜೆಡಿಎಸ್ ಕಾರ್ಯಕರ್ತರನ್ನ ಪೊಲೀಸರು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

ನಿನ್ನೆ ಕೆ.ಆರ್ ಪೇಟೆ ಅಭ್ಯರ್ಥಿ ನಾರಾಯಣಗೌಡ ನಾಮಪತ್ರ ಸಲ್ಲಿಸುವ ವೇಳೆ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿತ್ತು. ನಂತರ ನಾಮಪತ್ರ ಸಲ್ಲಿಸಿ ಕಚೇರಿಯಿಂದ ಹೊರ ಬಂದ ನಾರಾಯಣಗೌಡರ ಮೇಲೆ ಜೆಡಿಎಸ್ ಕಾರ್ಯಕರ್ತರು ಚಪ್ಪಲಿ ಎಸೆದು ಬಾಂಬೆ ಕಳ್ಳ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು.

ಪ್ರಕರಣ ಸಂಬಂಧ ಕೆ.ಆರ್ ಪೇಟೆ ಪಟ್ಟಣ ಠಾಣೆಯಲ್ಲಿ ನಾಲ್ವರು ಜೆಡಿಎಸ್ ಕಾರ್ಯಕರ್ತರ ವಿರುದ್ದ ಎಫ್ ಐಆರ್ ದಾಖಲಾಗಿದ್ದು ನಾಲ್ವರನ್ನ ಪೊಲೀಸರು ಬಂಧಿಸಿದ್ದರು. ಈ ನಡುವೆ ನಿನ್ನೆ ರಾತ್ರಿ ಜೆಡಿಎಸ್ ಮುಖಂಡರ ಒತ್ತಡ ಹೆಚ್ಚಾದ ಹಿನ್ನೆಲೆ ಜಾಮೀನಿನ ಮೇಲೆ ನಾಲ್ವರನ್ನ ಬಿಡುಗಡೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: k.r pet- BJP candidate -Narayana Gowda-Arrest – JDS activists- Release.