ಕೆ.ಆರ್ ಪೇಟೆಯಲ್ಲಿ ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ:  ನಾರಾಯಣಗೌಡ ಮೇಲೆ ಚಪ್ಪಲಿ ಎಸೆಯಲು ಯತ್ನ…

ಕೆ.ಆರ್ ಪೇಟೆ,ನ,18,2019(www.justkannada.in): ಕೆ.ಆರ್ ಪೇಟೆ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ನಾಮಪತ್ರ ಸಲ್ಲಿಸುವ ವೇಳೆ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಜೆಡಿಎಸ್ ಕಾರ್ಯಕರ್ತನೊಬ್ಬ  ನಾರಾಯಣಗೌಡ ಅವರ ಮೇಲೆ ಚಪ್ಪಲಿ ಎಸೆದಿರುವ ಘಟನೆ ನಡೆದಿದೆ.

ಕೆ.ಆರ್ ಪೇಟೆ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ನಾಮಪತ್ರ ಸಲ್ಲಿಸಿದರು. ಈ ಸಮಯದಲ್ಲಿ ತಹಶೀಲ್ದಾರ್ ಕಚೇರಿಗೆ ಮೆರವಣಿಗೆ ಮೂಲಕ ಆಗಮಿಸಿದ ಜೆಡಿಎಸ್ ಕಾರ್ಯಕರ್ತರು ಕಚೇರಿ ಬಳಿ ಬಿಜೆಪಿ  ಅಭ್ಯರ್ಥಿ ನಾರಾಯಣಗೌಡಗೆ ಧಿಕ್ಕಾರ ಕೂಗಿದ್ದಾರೆ. ಈ ಸಮಯದಲ್ಲಿ ಅಲ್ಲಿದ್ದ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಈ ನಡುವೆ ಪೊಲೀಸ್ ಭದ್ರತೆಯಲ್ಲಿ ತಹಶೀಲ್ದಾರ್ ಕಚೇರಿಯಿಂದ ಹೊರಬಂದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೇಲೆ ಜೆಡಿಎಸ್ ಕಾರ್ಯಕರ್ತನೊಬ್ಬ ಚಪ್ಪಲಿ ಎಸೆಯಲು ಯತ್ನಿಸಿದ್ದಾನೆ ಎನ್ನಲಾಗಿದೆ. ನಂತರ ನಾ ಎಸ್ ಪಿ ಕಾರಿನಲ್ಲಿ ನಾರಾಯಣಗೌಡ ತೆರಳಲು ಮುಂದಾಗಿದ್ದ ವೇಳೆ ಜೆಡಿಎಸ್ ಕಾರ್ಯಕರ್ತರು ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿ ನಾರಾಯಣಗೌಡ ಅವರ ಮೇಲೆ ಜೆಡಿಎಸ್ ಬಾವುಟ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Key words: k.r pet- by-election- bjp candidate-narayana gowda-jds-bjp-clash