ಈ ಕಾರಣದಿಂದಾಗಿಯೇ ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿ ಗೆಲುವು ಸಾಧಿಸುತ್ತಿದೆ ಎಂದ ಬಿವೈ ವಿಜಯೇಂದ್ರ….

ಕಲ್ಬರ್ಗಿ,ನವೆಂಬರ್,13,2020(www.justkannada.in): ಬಿಜೆಪಿ ಎಲ್ಲಾ ಸಮುದಾಯವನ್ನು ಒಂದೇ ರೀತಿ ನೋಡುತ್ತದೆ. ಹೀಗಾಗಿ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಗೆಲ್ಲುತ್ತಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.kannada-journalist-media-fourth-estate-under-loss

ಕಲ್ಬರ್ಗಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಬಿವೈ ವಿಜಯೇಂದ್ರ, ಕಾಂಗ್ರೆಸ್ ಮತ್ತು ಜೆಡಿಎಸ್ ಗಳು ಜಾತಿ ಆಧಾರದ ಮೇಲೆ ರಾಜಕೀಯ ಮಾಡುತ್ತಾರೆ. ಆದರೆ ಬಿಜೆಪಿ ಎಲ್ಲಾ ಸಮುದಾಯವನ್ನ ಒಂದೇ ರೀತಿಯಲ್ಲಿ ಕಾಣುತ್ತದೆ. ಅದ್ದರಿಂದ ಬಿಜೆಪಿಗೆ ಗೆಲುವು ಸಿಗುತ್ತಿದೆ ಎಂದು ಹೇಳಿದರು.kalburgi-by-vijayendra-bjp-winning-all-elections

ಬೀದರ್ ಜಿಲ್ಲೆ ಬಸವಕಲ್ಯಾಣ ಉಪಚುನಾವಣೆ ಕುರಿತು ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ, ನಾನು ಟಿಕೆಟ್ ಆಕಾಂಕ್ಷಿಯಲ್ಲ. ಅಭ್ಯರ್ಥಿಯನ್ನ ಹೈಕಮಾಂಡ್ ಆಯ್ಕೆ ಮಾಡುತ್ತದೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.

Key words: kalburgi- BY Vijayendra – BJP – winning – all elections