ಅಯೋಧ್ಯೆಗೆ ತೆರಳಿದ್ದ ಕಲ್ಬುರ್ಗಿ ಮೂಲದ ಮೂವರು ಅಪಘಾತದಲ್ಲಿ ಸಾವು.

ಉತ್ತರಪ್ರದೇಶ, ಮೇ, 25, 2024 (www.justkannada.in):  ಅಯೋಧ್ಯೆ ಶ್ರೀರಾಮನ ದರ್ಶನಕ್ಕೆ ತೆರಳಿದ್ದ ಕಲ್ಬುರ್ಗಿ ಮೂಲದ ಮೂವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.

ನಿನ್ನೆ ರಾತ್ರಿ ಅಯೋಧ್ಯೆಯ ಬಳಿ ಲಾರಿ ಮತ್ತು ಟಿಟಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಶಿವರಾಜ್, ಕಾಶಿನಾಥ್ ಹಾಗೂ ತಂಗೆಮ್ಮ ಮೂವರು ಸಾವನ್ನಪ್ಪಿದ್ದಾರೆ. ಇನ್ನುಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ.

ಗಾಯಾಳುಗಳಿಗೆ ಅಯೋಧ್ಯೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದೇ ಕುಟುಂಬದ 22 ಜನ ಕಾಶಿ ವಿಶ್ವನಾಥನ ದರ್ಶನ ಮುಗಿಸಿ ಟಿಟಿಯಲ್ಲಿ ಉತ್ತರ ಪ್ರದೇಶದ ಅಯೋಧ್ಯೆಗೆ ತೆರಳುತ್ತಿದ್ದರು. ಈ ವೇಳೆ ಲಾರಿಗೆ ಟಿಟಿ ವಾಹನ ಮುಖಾಮುಖಿ ಡಿಕ್ಕಿ ಹೊಡೆದಿದೆ. ಈ ವೇಳೆ ಕಲಬುರ್ಗಿ ಜಿಲ್ಲೆಯ ಮೂವರು ಸಾವನ್ನಪ್ಪಿದ್ದಾರೆ.

Key words: Kalburgi – Three people – Ayodhya -died – accident