ಬೆಂಗಳೂರು, ಜೂನ್ 2, 2025 (www.justkannada.in): ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಾತ್ಮಕವಾಗಿ ಹೇಳಿಕೆ ನೀಡಿದ ಆರೋಪದ ಮೇಲೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಎಫ್ ಐಆರ್ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೇ 12ರಂದು ಬಂಟ್ವಾಳದ ಕಾವಳಪಡೂರು ಗ್ರಾಮದ ಮದುವೆ ಪ್ಯಾಲೇಸ್ ಹಾಲ್ ನಲ್ಲಿ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕಲ್ಲಡ್ಕ ಪ್ರಭಾಕರ್ ಸಮಾಜದ ಸ್ವಾಸ್ಥ್ಯ ಕೆಡುವುದು ಮತ್ತು ಗುಂಪುಗಳ ನಡುವೆ ದ್ವೇಷ ಬಿತ್ತುವಂತೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಬಿಎನ್ಎಸ್ 353(2)ರಡಿ ಪ್ರಕರಣದಡಿ ಎಫ್ಐಆರ್ ದಾಖಲಾಗಿದೆ.
Ke words: FIR, filed, against, RSS leader, Kalladka Prabhakar







