Sunday, September 20, 2026

BDA Apartments

ಕನಕದಾಸರನ್ನು ಒಂದು ಜಾತಿಗೆ ಸೀಮಿತಗೊಳಿಸಬಾರದು : ಕಾಂಗ್ರೆಸ್ ಮುಖಂಡ ಕೆ.ಹರೀಶ...
Home Front Page ಕನಕದಾಸರನ್ನು ಒಂದು ಜಾತಿಗೆ ಸೀಮಿತಗೊಳಿಸಬಾರದು : ಕಾಂಗ್ರೆಸ್ ಮುಖಂಡ ಕೆ.ಹರೀಶ್ ಗೌಡ

ಕನಕದಾಸರನ್ನು ಒಂದು ಜಾತಿಗೆ ಸೀಮಿತಗೊಳಿಸಬಾರದು : ಕಾಂಗ್ರೆಸ್ ಮುಖಂಡ ಕೆ.ಹರೀಶ್ ಗೌಡ

ಮೈಸೂರು,ಡಿಸೆಂಬರ್,03,2020(www.justkannada.in) : ಕನಕದಾಸರನ್ನು ಒಂದು ಜಾತಿಗೆ ಸೀಮಿತಗೊಳಿಸಬಾರದು. ಅವರನ್ನು ಎಲ್ಲರೂ ಪ್ರೇರಣೆಯಾಗಿ ಸ್ವೀಕರಿಸಿ, ಅವರ ತತ್ವಗಳನ್ನು ಅಳವಡಿಸಿಕೊಂಡು ಬದುಕಬೇಕು ಎಂದು ಕಾಂಗ್ರೆಸ್ ಮುಖಂಡ ಕೆ.ಹರೀಶ್ ಗೌಡ ಹೇಳಿದರು.logo-justkannada-mysore

ವಿಶ್ವಮಾನವ ಮೈಸೂರು ವಿಶ್ವವಿದ್ಯಾನಿಲಯ ನೌಕರರ ವೇದಿಕೆ ವತಿಯಿಂದ ಮೈಸೂರು ವಿವಿ ಸಂಜೆ ಕಾಲೇಜು ಆವರಣದಲ್ಲಿ ಶ್ರೀ ಕನಕದಾಸ ಜಯಂತ್ಯೋತ್ಸವದಲ್ಲಿ ವಿವಿಧ ಕ್ಷೇತ್ರದ ಗಣ್ಯರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಾಜಿ ಮೇಯರ್ ಪುರುಷೋತ್ತಮ್, ತಿ.ನರಸೀಪುರ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಮರಿಸ್ವಾಮಿ, ಯುವರಾಜ ಕಾಲೇಜಿನ ಆಡಳಿತಾಧಿಕಾರಿ ಡಾ.ದೇವರಾಜೇಗೌಡ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ವಿವಿ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಹೆಚ್.ಆರ್.ಪುಟ್ಟಸ್ವಾಮಿ, ಮೈಸೂರು ವಿವಿ ಪ್ರಾಚ್ಯ ವಿದ್ಯಾ ಸಂಶೋಧನಾಲಯ ನಿರ್ದೇಶಕ ಪ್ರೊ.ಎಸ್.ಶಿವರಾಜಪ್ಪ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು, ವಕೀಲ ಉಮೇಶ್ ಇತರರು ಉಪಸ್ಥಿತರಿದ್ದರು.

 Kanakadasas-should-not-confined-one-caste-Congress-leader K. Harish Gowda

key words : Kanakadasas-should-not-confined-one-caste-Congress-leader K. Harish Gowda