ಜನಸಂಖ್ಯೆ ನಿಯಂತ್ರಣಕ್ಕೆ ವಿವಾದಾತ್ಮಕ ಸಲಹೆ ಕೊಟ್ಟು ಮತ್ತೊಂದು ವಿವಾದ ಸೃಷ್ಟಿಸಿದ ಕಂಗನಾ

ಬೆಂಗಳೂರು, ಏಪ್ರಿಲ್ 22, 2021 (www.justkannada.in): ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮೂರನೇ ಮಗು ಹೊಂದಿದವರನ್ನು ಜೈಲಿಗಟ್ಟಬೇಕು ಎಂದು ಹೇಳಿದ್ದಾರೆ.

ಜನಸಂಖ್ಯೆ ನಿಯಂತ್ರಣಕ್ಕೆ ದೇಶದಲ್ಲಿ ಕಟ್ಟುನಿಟ್ಟಿನ ಕಾನೂನು ಜಾರಿಗೊಳಿಸಬೇಕು ಎಂದು ಆಗ್ರಹಿಸಿರುವ ಕಂಗನಾ ಇದಕ್ಕಾಗಿ ಹೊಸ ಸಲಹೆಯನ್ನೂ ನೀಡಿದ್ದಾರೆ.

ಇಂದಿನ ಬಿಕ್ಕಟ್ಟನ್ನು ಗಮನಿಸಿದಾಗ ಕನಿಷ್ಠ ಮೂರನೇ ಮಗು ಹೊಂದಿದರೆ ದಂಡ ಅಥವಾ ಕನಿಷ್ಠ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಬೇಕು ಎಂದು ಟ್ವಿಟ್ಟರ್ ನಲ್ಲಿ ಆಗ್ರಹಿಸಿದ್ದಾರೆ.

ಕಂಗನಾ ರಣಾವತ್ ಅವರ ಈ ಟ್ವೀಟ್ ವಿವಾದಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.