Thursday, August 13, 2026

BDA Apartments

Home Cinema ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್‌ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್‌ ನಿಧನ

ಬೆಂಗಳೂರು, ಅಕ್ಟೋಬರ್ 10, 2021 (www.justkannada.in): ಬೌರಿಂಗ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ಸತ್ಯಜಿತ್‌(72) ಇಂದು ಮುಂಜಾನೆ ನಿಧನರಾದರು.

ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಹಿರಿಯ ನಟ ಸತ್ಯಜಿತ್‌ ಬೌರಿಂಗ್‌ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಕಾರಣ ವಾರದ ಹಿಂದಷ್ಟೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

2016ರಲ್ಲಿ ಗ್ಯಾಂಗ್ರಿನ್‌ಗೆ ತುತ್ತಾಗಿ ಒಂದು ಕಾಲನ್ನು ಸತ್ಯಜಿತ್‌ ಕಳೆದುಕೊಂಡರು. ಬಳಿಕವೂ ಬೆಳ್ಳಿತೆರೆ ಮೇಲೆ ಕಾಣಿಸಿಕೊಂಡಿದ್ದರು. ಪುತ್ರಿ ವಿಮಾನಯಾನ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಪುತ್ರ ಚಿತ್ರರಂಗದಲ್ಲಿ ತೊಡಗಿದ್ದಾರೆ.

1986ರಲ್ಲಿ ಬಿಡುಗಡೆಯಾದ ‘ಅಂಕುಶ್‌’ ಚಿತ್ರರಂಗಕ್ಕೆ ಕಾಲಿಟ್ಟದ್ದರು. ‘ಪುಟ್ನಂಜ’, ‘ಶಿವಮೆಚ್ಚಿದ ಕಣ್ಣಪ್ಪ’, ‘ಚೈತ್ರದ ಪ್ರೇಮಾಂಜಲಿ’, ‘ಆಪ್ತಮಿತ್ರ’ ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ.

key words: kannada cine actor satyajit is no more