Saturday, August 22, 2026

BDA Apartments

Home Front Page ಕಾವೇರಿ ಹೋರಾಟ: ಬೆಂಗಳೂರು ಬಂದ್’ಗೆ ಕನ್ನಡ ಚಿತ್ರೋದ್ಯಮ ಬೆಂಬಲ

ಕಾವೇರಿ ಹೋರಾಟ: ಬೆಂಗಳೂರು ಬಂದ್’ಗೆ ಕನ್ನಡ ಚಿತ್ರೋದ್ಯಮ ಬೆಂಬಲ

ಬೆಂಗಳೂರು, ಸೆಪ್ಟೆಂಬರ್ 26, 2023 (www.justkannada.in): ಕಾವೇರಿ ಹೋರಾಟದ ಪ್ರಯುಕ್ತ ಕರೆ ನೀಡಿರುವ ಬೆಂಗಳೂರು ಬಂದ್​ಗೆ ಕನ್ನಡ ಚಿತ್ರೋದ್ಯಮ ಬೆಂಬಲ ಸೂಚಿಸಿದೆ.

ಕನ್ನಡ ಚಿತ್ರೋದ್ಯಮ ಬೆಂಗಳೂರು ಬಂದ್​ಗೆ ಸಂಪೂರ್ಣ ಬೆಂಬಲ ಸೂಚಿಸಿದ ಹಿನ್ನೆಲೆಯಲ್ಲಿ ಸಿನಿಮಾ ಶೂಟಿಂಗ್ ಬಂದ್​​ ಆಗಿದೆ. ಚಿತ್ರ ಮಂದಿರಗಳಲ್ಲಿ ಪ್ರದರ್ಶನ ಸ್ಥಗಿತ ಮಾಡಲಾಗಿದೆ.

ಬೆಂಗಳೂರಿನಲ್ಲಿ ನಡೆಯುತ್ತಿದ್ದ ಚಿತ್ರೀಕರಣವನ್ನು ನಿಲ್ಲಿಸಲಾಗಿದೆ. ಟೆಲಿವಿಷನ್ ಅಸೋಸಿಯೇಷನ್ ಕೂಡ ಬಂದ್ ಗೆ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಸೀರಿಯಲ್ ಹಾಗೂ ರಿಯಾಲಿಟಿ ಶೋ ಚಿತ್ರೀಕರಣಗಳು ನಡೆಯುತ್ತಿಲ್ಲ.

ಬಂದ್ ಗೆ ಬೆಂಬಲ ಹಿನ್ನೆಲೆಯಲ್ಲಿ ನಗರದಲ್ಲಿ ಇಂದು ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನವಿಲ್ಲ.