ನಟ ದಳಪತಿ ವಿಜಯ್ ‘ಲಿಯೋ’ ಚಿತ್ರದ ಕನ್ನಡ ಪೋಸ್ಟರ್ ಬಿಡುಗಡೆ

ಬೆಂಗಳೂರು, ಸೆಪ್ಟೆಂಬರ್ 19, 2023 (www.justkannada.in): ನಟ ದಳಪತಿ ವಿಜಯ್ ಅವರ ಮುಂದಿನ ಚಿತ್ರ ಲಿಯೋಸಿನಿಮಾದ ಕನ್ನಡ ಪೋಸ್ಟರ್ ಅನ್ನು ಗಣೇಶ ಚತುರ್ಥಿ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ.

ಲಿಯೋ ಚಿತ್ರವನ್ನು ಕನ್ನಡದಲ್ಲೂ ದೊಡ್ಡ ಮಟ್ಟದಲ್ಲಿ ರಿಲೀಸ್ ಮಾಡಲು ತಯಾರಿ ನಡೆದಿದೆ.  ಇದಕ್ಕಾಗಿ ವಿಶೇಷ ಪೋಸ್ಟರ್ ಕೂಡ ರಿಲೀಸ್ ಮಾಡಲಾಗಿದೆ.

‘ಲಿಯೋ’ ಸಿನಿಮಾ ಅಕ್ಟೋಬರ್ 19ರಂದು ರಿಲೀಸ್ ಆಗಲಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಕನ್ನಡದಲ್ಲಿ ಶಿವರಾಜ್​ಕುಮಾರ್ ನಟನೆಯ ‘ಘೋಸ್ಟ್’ ಸಿನಿಮಾ ಬಿಡುಗಡೆ ಆಗಲಿದೆ.

‘ಲಿಯೋ’ ಚಿತ್ರಕ್ಕೆ ಲೋಕೇಶ್ ಕನಗರಾಜ್ ಅವರ ನಿರ್ದೇಶನ ಇದೆ. ಅವರು ಈ ಮೊದಲು ‘ಕೈದಿ’, ‘ವಿಕ್ರಮ್’ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ.

ಶಿವರಾಜ್​ಕುಮಾರ್ ನಟನೆಯ ‘ಘೋಸ್ಟ್’ ಸಿನಿಮಾ ಬಗ್ಗೆ ಈಗಾಗಲೇ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಇದಕ್ಕೆ ಕಠಿಣ ಸ್ಪರ್ಧೆ ಒಡ್ಡಲು ಕನ್ನಡದಲ್ಲಿ ‘ಲಿಯೋ’ ಚಿತ್ರವನ್ನು ರಿಲೀಸ್ ಮಾಡಲು ಹೆಚ್ಚು ಒತ್ತು ನೀಡಲಾಗುತ್ತಿದೆ ಎನ್ನಲಾಗಿದೆ.