Monday, August 3, 2026

BDA Apartments

Home Front Page ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಸಿಎಂ ಬಿ.ಎಸ್ ಯಡಿಯೂರಪ್ಪ…

ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಸಿಎಂ ಬಿ.ಎಸ್ ಯಡಿಯೂರಪ್ಪ…

ಬೆಂಗಳೂರು,ನ,1,2019(www.justkannada.in): ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವ ಸಂಭ್ರಮವಾಗಿದ್ದು ನಾಡಿನ ಜನತೆಗೆ ಸಿಎಂ ಬಿಎಸ್ ಯಡಿಯೂರಪ್ಪ ಶುಭಾಶಯ ಕೋರಿದ್ದಾರೆ.

 ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ಸಾರ್ವಜನಿಕ ಇಲಾಖೆಯು ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಮೊದಲಿಗೆ ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿದರು. ಬಳಿಕ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ತದನಂತರ ಕನ್ನಡ ನಾಡಧ್ವಜಾರೋಹಣ  ಮಾಡಿದರು.

ಈ ವೇಳೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೇರಿ ಹಲವರು ಉಪಸ್ಥಿತರಿದ್ದರು.

Key words: Kannada Rajyotsava- celebrations-  CM BS Yeddyurappa – flag