Thursday, September 10, 2026

BDA Apartments

Home Front Page ಕನ್ನಡ ರಾಜ್ಯೋತ್ಸವ: ಕನ್ನಡದಲ್ಲೇ ಶುಭಕೋರಿದ ಪ್ರಧಾನಿ ಮೋದಿ

ಕನ್ನಡ ರಾಜ್ಯೋತ್ಸವ: ಕನ್ನಡದಲ್ಲೇ ಶುಭಕೋರಿದ ಪ್ರಧಾನಿ ಮೋದಿ

ಬೆಂಗಳೂರು, ನವೆಂಬರ್ 1,2024 (www.justkannada.in): ಇಂದು ನಾಡಿನೆಲ್ಲಡೆ ಕನ್ನಡ ರಾಜ್ಯೋತ್ಸವದ ಸಂಭ್ರಮವಾಗಿದ್ದು ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಶುಭಕೋರಿದ್ದಾರೆ.

ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಕನ್ನಡದಲ್ಲೇ ಸಂದೇಶ ಪ್ರಕಟಿಸುವ ಅವರು ಕರ್ನಾಟಕದ ಜತೆ ಸದಾ ಸಂತೋಷ, ಯಶಸ್ಸು ಗಳಿಸುವಂತಾಗಲಿ ಎಂದು ಹಾರೈಸಿದ್ದಾರೆ.

‘ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ ಕೂಡಿರಲಿ ಎಂದು ಶುಭಹಾರೈಸಿದ್ದಾರೆ.

Key words: Kannada Rajyotsava, PM Modi, wishes, Kannada