ಮೈಸೂರು ಸೇರಿದಂತೆ ರಾಜ್ಯಾದ್ಯಂತ ಕಸಾಪ ಚುನಾವಣೆ: ಬಿರುಸಿನ ಮತದಾನ

ಮೈಸೂರು, ಅಕ್ಟೋಬರ್ 21, 2021 (www.justkannada.in): ಮೈಸೂರು ಸೇರಿದಂತೆ ಇಂದು ರಾಜ್ಯಾಧ್ಯಂತ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಕಾರ್ಯಕಾರಿ ಮಂಡಳಿಯ ಚುನಾವಣೆ ಮತದಾನ ಬಿರುಸಿನಿಂದ ಸಾಗಿದೆ.

ಮೈಸೂರು ಜಿಲ್ಲೆಯಲ್ಲೂ ಮತದಾನ ನಡೆಯುತ್ತಿದ್ದು, ತಾಲೂಕು ಕೇಂದ್ರಗಳಲ್ಲಿ ಸ್ಥಾಪಿಸಿರುವ ಮತಗಟ್ಟೆಗಳಲ್ಲಿಯೂ ಕಸಾಪ ಸದಸ್ಯರು ಮತದಾನ ಮಾಡುತ್ತಿದ್ದಾರೆ.

ಮೈಸೂರು ಕಸಾಪ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮಡ್ಡಿಕೇರೆ ಗೋಪಾಲ್, ಬನ್ನೂರು ರಾಜು ಹಾಗೂ ನಾಗರಾಜ್ ಅವರು ಸ್ಪರ್ಧಿಸಿದ್ದು, ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಚುನಾವಣೆಯಲ್ಲಿ ನಕಲು ಮತದಾನ ತಡೆಗಟ್ಟುವ ನಿಟ್ಟಿನಲ್ಲಿ ಮಹತ್ವದ ಕ್ರಮವನ್ನು ಚುನಾವಣಾ ಆಯೋಗ ಕೈಗೊಂಡಿದ್ದು, ಮತ ಚಲಾಯಿಸಲು, ಮತದಾರರಿಗೆ ಈ ಕೆಲ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ.

ಯಾವ ಮತದಾರರ ಬಳಿ ಕನ್ನಡ ಸಾಹಿತ್ಯ ಪರಿಷತ್ತು ನೀಡಿರುವ ಭಾವಚಿತ್ರ ಸಹಿತ ಗುರುತಿನ ಚೀಟಿ ಇರುವುದಿಲ್ಲವೋ ಅಂತಹ ಮತದಾರರು, ಈ ಕೆಳಕಂಡ 18 ವಿವಿಧ ರೀತಿಯ ದಾಖಲಾತಿಗಳನ್ನು ಮತದಾನದ ಸಂದರ್ಭದಲ್ಲಿ ಹಾಜರುಪಡಿಸಿ, ತಮ್ಮ ಮತವನ್ನು ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.