ಕನ್ನಡ ಹಿರಿಯ ನಟ ಶಿವರಾಂ ಇನ್ನಿಲ್ಲ.

ಬೆಂಗಳೂರು,ಡಿಸೆಂಬರ್,4,2021(www.justkannada.in):  ತಲೆಗೆ ಪೆಟ್ಟಾಗಿ ಬೆಂಗಳೂರಿನ ಪ್ರಶಾಂತ್  ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ(84) ಇಹಲೋಕ ತ್ಯಜಿಸಿದ್ದಾರೆ.

ಹಿರಿಯ ನಟ ಶಿವರಾಂ ಅವರು ಅಯ್ಯಪ್ಪಸ್ವಾಮಿ ಪೂಜೆ ಮಾಡುವ ವೇಳೆ ಬಿದ್ದು ತಲೆಗೆ ಪೆಟ್ಟು ಬಿದ್ದಿತ್ತು. ಮೆದುಳು ಡ್ಯಾಮೇಜ್ ಆಗಿತ್ತು. ವಯಸ್ಸಾದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಶಿವರಾಂ ಅವರು ಕೊನೆಯುಸಿರೆಳೆದಿದ್ದಾರೆ.

ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಚಿತ್ರ ಹಾಗೂ ಸೀರಿಯಲ್​ ಗಳಲ್ಲಿ ಶಿವರಾಂ ಅವರು  ನಟಿಸಿದ್ದರು.  1938ರಲ್ಲಿ ಚೂಡಸಂದ್ರ ಹಳ್ಳಿಯಲ್ಲಿ ಜನಿಸಿದ್ದ ಎಸ್. ಶಿವರಾಂ, 6 ದಶಕಗಳ ಕಾಲ ನೂರಾರು ಚಿತ್ರಗಳಲ್ಲಿ ಅಭಿನಯಿಸಿದ್ದರು. ಚಿತ್ರರಂಗದಲ್ಲಿ ಅವರು ಶಿವರಾಮಣ್ಣ ಎಂದೇ ಎಲ್ಲರಿಗೂ ಪರಿಚಿತರಾಗಿದ್ದರು. ಪೋಷಕ ನಟನಾಗಿ, ಹಾಸ್ಯನಟನಾಗಿ ನಟಿಸಿದ್ದ ಅವರು, ನಿರ್ದೇಶಕ, ನಿರ್ಮಾಪಕರಾಗಿಯೂ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದರು.

ಸೋದರ ರಾಮನಾಥನ್ ಜತೆ ಸೇರಿ ‘ರಾಶಿ ಬ್ರದರ್ಸ್‌’ ಸಿನಿಮಾ ಸಂಸ್ಥೆ ಸ್ಥಾಪಿಸಿ ಹಲವು ಚಿತ್ರ ನಿರ್ಮಿಸಿದ್ದರು. ಚಿತ್ರರಂಗದ ದಿಗ್ಗಜ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಜತೆಯೂ ಶಿವರಾಂ ಕೆಲಸ ಮಾಡಿದ್ದರು. ಹಲವು ದಿಗ್ಗಜ ನಟರೊಂದಿಗೆ ಶಿವರಾಂ ತೆರೆ ಹಂಚಿಕೊಂಡಿದ್ದರು.

Key words: Kannada -senior -actor -Shivaram -no more.

ENGLISH SUMMARY…

Veteran Sandalwood actor Shivaram no more
Bengaluru, December 4, 2021 (www.justkannada.in): Sandalwood’s veteran actor Shivaram (84), who was hospitalized due to a head injury after falling at his house, is no more.
Actor Shivaram reportedly fell while conducting the Ayyappa Swamy pooja resulting in brain damage. The doctors had ruled out surgery due to the age factor, and he was being treated in the ICU. He expired today.
Shivaram had acted in many films and had also appeared on the small screen in several serials. Shivaram was born as S. Shivaram, at the Choodasandra Village, in 1938. He has acted in hundreds of films in his 6 decades of film journey. He was popularly known as ‘Shivaramanna’ among his colleagues. He had earned a name in the Sandalwood as a comedian and character artist. He also has directed and produced several movies.
He along with his sibling Ramanathan had established a production house under the name ‘Rashi Brothers,’ and had produced several movies. He had also worked with renowned director Puttanna Kanagal and also had the pride of sharing screen presence with several stalwarts of Sandalwood.
Keywords: Sandalwood actor Shivaram/ no more