ಬೆಂಗಳೂರು,ಸೆಪ್ಟಂಬರ್,10,2025 (www.justkannada.in): ನೇಪಾಳದಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲೆ ನಿಷೇಧ ಹೇರಿದ್ದ ಹಿನ್ನೆಲೆಯಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆದಿದ್ದು ಈ ನಡುವೆ ಅಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ವಿವಿಧ ತಂಡಗಳಲ್ಲಿ ಇರುವ ಕನ್ನಡಿಗರ ಸಂಪರ್ಕದಲ್ಲಿದ್ದಾರೆ. ರಾಜ್ಯ ಸರ್ಕಾರದ ಅಧಿಕಾರಿಗಳು ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ.
ನೇಪಾಳದಲ್ಲಿ ಸಾಮಾಜಿಕ ಮಾಧ್ಯಮಗಳ ಮೇಲೆ ನಿಷೇಧ ಹೇರಿದ ಹಿನ್ನೆಲೆಯಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದು 20 ಮಂದಿ ಸಾವನ್ನಪ್ಪಿ, 250 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
Key words: Kannadigas, stranded, Nepal , safe