Saturday, August 15, 2026

BDA Apartments

Home Front Page ಹಿಂದೂ ಯುವತಿ ಮೇಲೆ ಅತ್ಯಾಚಾರ: ಇಂತಹ ಕೃತ್ಯ ತಡೆಗಟ್ಟಲು ಸರ್ಕಾರ ವಿಫಲ – ಸುನೀಲ್ ಕುಮಾರ್...

ಹಿಂದೂ ಯುವತಿ ಮೇಲೆ ಅತ್ಯಾಚಾರ: ಇಂತಹ ಕೃತ್ಯ ತಡೆಗಟ್ಟಲು ಸರ್ಕಾರ ವಿಫಲ – ಸುನೀಲ್ ಕುಮಾರ್ ವಾಗ್ದಾಳಿ

ಬೆಂಗಳೂರು, ಆಗಸ್ಟ್,24,2024 (www.justkannada.in):  ಕಾರ್ಕಳದಲ್ಲಿ ಹಿಂದೂ ಯುವತಿ ಮೇಲೆ ಅತ್ಯಾಚಾರ ನಡೆದಿದೆ. ಇಂತಹ ಕೃತ್ಯಗಳನ್ನ  ತಡೆಗಟ್ಟಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದರು.

ಈ ಕುರಿತು ಮಾತನಾಡಿದ ಶಾಸಕ ಸುನೀಲ್ ಕುಮಾರ್, ಅನ್ಯಕೋಮಿನ ಯುವಕ ಹಿಂದೂ ಯುವತಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಇದು ಪೂರ್ವನಿಯೋಜಿತ ಕೃತ್ಯವಾಗಿದೆ. ಯುವತಿಯರು ಇಂತಹ ಘಟನೆಗಳ ಬಗ್ಗೆ ಎಚ್ಚರದಿಂದ ಇರಬೇಕು. ಹಿಂದೂ ಯುವತಿಯರು ಆಸೆ, ಆಮಿಷಗಳಿಗೆ ಒಳಗಾಗಬಾರದು ಎಂದರು.

ಇಂತಹ ಕೃತ್ಯ ತಡೆಗಟ್ಟಲು ರಾಜ್ಯ ಸರ್ಕಾರ ವಿಫಲವಾಗಿದೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು. ಲವ್ ಜಿಹಾದ್ ನಂತಹ ಪ್ರಕರಣಗಳ ಬಗ್ಗೆ ಸರ್ಕಾರ ಎಚ್ಚರವಹಿಸಬೇಕು ಎಂದು ಸುನೀಲ್ ಕುಮಾರ್ ಆಗ್ರಹಿಸಿದರು.

Key words: Karkal, Rape, Hindu woman, Government, Sunil Kumar