Monday, September 21, 2026

BDA Apartments

ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ : ಸರಕಾರದ ಆದೇಶ ರದ್ದು ಪಡಿಸಿದ ಹೈಕೋರ್ಟ್‌ BDA JK_A...
Home Front Page ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ : ಸರಕಾರದ ಆದೇಶ ರದ್ದು ಪಡಿಸಿದ ಹೈಕೋರ್ಟ್‌ ..

ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ : ಸರಕಾರದ ಆದೇಶ ರದ್ದು ಪಡಿಸಿದ ಹೈಕೋರ್ಟ್‌ ..

Karnataka ̲ board ̲ exam ̲ court ̲ cancelled

ಬೆಂಗಳೂರು, ಮಾ.೦೬, ೨೦೨೪ :  ಸ್ಟೇಟ್‌ ಸಿಲಬಸ್‌ ( ರಾಜ್ಯ  ಪಠ್ಯಕ್ರಮ) ಅನುಸರಿಸುವ ಶಾಲೆಗಳ 5, 8, 9 ಹಾಗೂ 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವಂತೆ  ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

ಈ  ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಈ ಹಿಂದೆ ಸುತ್ತೋಲೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ನ್ಯಾಯಪೀಠ ಬುಧವಾರ ತೀರ್ಪು ಪ್ರಕಟಿಸಿತು.

ಈ ಆದೇಶದಿಂದ ಇದೇ ಮಾರ್ಚ್ 9 ರಿಂದ 11ರವರೆಗೂ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾದಂತಾಗಿದೆ.

ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ sslc sslc 1

ಇದನ್ನು ಪ್ರಶ್ನಿಸಿದ್ದ ಅರ್ಜಿದಾರರ‌ ಸಂಘ, ಶಿಕ್ಷಣ ಇಲಾಖೆ ಸುತ್ತೋಲೆ ಕೇವಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ. ಇದು ಪಠ್ಯಕ್ರಮದ ಭಾಗವಲ್ಲ. ಆದರೆ, ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಸಿದ್ಧಪಡಿಸಿರುವುದಾಗಿ ಸರ್ಕಾರ ಹೇಳುತ್ತಿದೆ. ಖಾಸಗಿ ಶಾಲೆಗಳ ಪಠ್ಯಕ್ರಮ ಹಾಗೂ ಸರ್ಕಾರಿ ಶಾಲೆಗಳ ಪಠ್ಯಕ್ರಮ ವಿಭಿನ್ನವಾಗಿವೆ. ಕಲಿಕಾ ಚೇತರಿಕೆ ಪಠ್ಯಕ್ರಮದ ಪ್ರಶ್ನೆಗಳಿಗೆ ಖಾಸಗಿ ಶಾಲಾ ಮಕ್ಕಳು ಉತ್ತರಿಸಲು ಕಷ್ಟ. ಹಾಗಾಗಿ, ಎಲ್ಲ ಮಕ್ಕಳಿಗೂ ಅನ್ವಯವಾಗುವಂತೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ಅವಕಾಶ ನೀಡಬಾರದು ಎಂದು ಕೋರಿದ್ದರು.

Key words : Karnataka ̲ board ̲ exam ̲ court ̲ cancelled